ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅನಿರ್ದಿಷ್ಟಾವಧಿಗೆ ಉಭಯ ಸದನಗಳ ಮುಂದೂಡಿಕೆ

Published 9 ಆಗಸ್ಟ್ 2024, 13:30 IST
Last Updated 9 ಆಗಸ್ಟ್ 2024, 13:30 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ನ ಉಭಯ ಸದನಗಳನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಮಳೆಗಾಲದ ಅಧಿವೇಶನ ಆಗಸ್ಟ್‌ 12ರವರೆಗೆ ನಿಗದಿಯಾಗಿತ್ತು. ಆದರೆ, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಿದರು. ರಾಜ್ಯಸಭೆಯ ಅಧಿವೇಶನವನ್ನು ಕೂಡ ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಈ ಅಧಿವೇಶನದಲ್ಲಿ ಹಣಕಾಸು ಮಸೂದೆಯನ್ನು ಅಂಗೀಕರಿಸಲಾಯಿತು.

ಅಲ್ಲದೇ, ಲೋಕಸಭೆಯಲ್ಲಿ ‘ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಲೋಕಸಭೆಯಲ್ಲಿ ಬಿರುಸಿನ ಚರ್ಚೆಗಳು ನಡೆದ ನಂತರ ಜಂಟಿ ಸದನ ಸಮಿತಿ (ಜೆಪಿಸಿ) ಪರಿಶೀಲನೆಗೆ ಒಪ್ಪಿಸಲು ಸೂಚಿಸಲಾಗಿದೆ.

ಸದನ ಕಲಾಪದ ಉದ್ದೇಶ ಶೇ 130ಕ್ಕಿಂತಲೂ ಹೆಚ್ಚಿದೆ ಎಂದು ಸ್ಪೀಕರ್‌ ಓಂ ಬಿರ್ಲಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT