ನವದೆಹಲಿ: ವಿರೋಧ ಪಕ್ಷಗಳ ಭಾಗವಹಿಸುವಿಕೆ ಇಲ್ಲದೆಯೇ ಎಂಟು ಮಸೂದೆಗಳನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೂ ಲೋಕಸಭೆಯು ರಾಷ್ಟ್ರೀಯ ಕ್ರೀಡಾ ಮಸೂದೆ–2025, ರಾಷ್ಟ್ರೀಯ ಉದ್ದೀಪನ ಮದ್ದುಸೇವನೆ ತಡೆ (ತಿದ್ದುಪಡಿ) ಮಸೂದೆ, ಆದಾಯ ತೆರಿಗೆ (ನಂ.2) ಮಸೂದೆ, ತೆರಿಗೆ ಕಾನೂನುಗಳು (ತಿದ್ದುಪಡಿ) ಮಸೂದೆಗಳನ್ನು ಅಂಗೀಕರಿಸಿತು.

ರಾಜ್ಯಸಭೆಯು ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಮೀಸಲಾತಿ ಕಲ್ಪಿಸುವ ಮಸೂದೆ ಮತ್ತು ಭಾರತೀಯ ವಾಣಿಜ್ಯ ಹಡಗು ಮಸೂದೆಯನ್ನು ಅಂಗೀಕರಿಸಿತು. ಲೋಕಸಭೆಯು ಈಗಾಗಲೇ ಅಂಗೀಕರಿಸಿದ್ದ ಮಣಿಪುರ ಧನ ವಿನಿಯೋಗ ಮಸೂದೆ ಮತ್ತು ಮಣಿಪುರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆಯನ್ನು ಹಿಂದಿರುಗಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.