ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Election 2024 | ಕಾಶ್ಮೀರದಲ್ಲಿ 5 ಸ್ಥಾನ ಗೆಲ್ಲುವ ಗುರಿ: ಬಿಜೆಪಿ

Published 27 ಜನವರಿ 2024, 11:12 IST
Last Updated 27 ಜನವರಿ 2024, 11:12 IST
ಅಕ್ಷರ ಗಾತ್ರ

ಶ್ರೀನಗರ: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಐದು ಸ್ಥಾನಗಳಲ್ಲಿಯೂ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಿ, ಪ್ರಚಾರ ಕಾರ್ಯ ಆರಂಭಿಸಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಅಶೋಕ್ ಕೌಲ್ ಶನಿವಾರ ಹೇಳಿದ್ದಾರೆ.

ಅನಂತನಾಗ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಗೆ ನಾವು ಸಿದ್ಧತೆ ಆರಂಭಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರದ ಐದು ಲೋಕಸಭಾ ಕ್ಷೇತ್ರಗಳಿಗೆ ವಲಯವಾರು ಉಸ್ತುವಾರಿಯಾಗಿ ಡಾ.ನಿರ್ಮಲ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೌಲ್ ತಿಳಿಸಿದ್ದಾರೆ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಐದು ಲೋಕಸಭಾ ಕ್ಷೇತ್ರಗಳಲ್ಲಿ ಆರು ಪ್ರಚಾರ ಕಚೇರಿಗಳನ್ನು ತೆರೆಯಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇಂಡಿಯಾ ಮೈತ್ರಿಕೂಟದ ಬಗ್ಗೆ ಪ್ರತಿಕ್ರಿಯಿಸಿದ ಕೌಲ್, ಇಂಡಿಯಾ ಮೈತ್ರಿಕೂಟ ಕೇವಲ ಫೋಟೊ ಸೆಷನ್ ಇದ್ದಂತೆ ಎಂದು ಮೊದಲಿನಿಂದಲೂ ಹೇಳಿದ್ದೇವೆ. ಪಶ್ಚಿಮ ಬಂಗಾಳದಲ್ಲಿ (ಟಿಎಂಸಿ) ಒಂದು ದಾರಿ, ಪಂಜಾಬ್ ಮತ್ತು ದೆಹಲಿಯಲ್ಲಿ (ಎಎಪಿ) ಇನ್ನೊಂದು ದಾರಿ ಎಂದು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT