ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ 72 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬುಧವಾರ ಪ್ರಕಟಿಸಿದ್ದು, ಕರ್ನಾಟಕದ 20 ಕ್ಷೇತ್ರಗಳಿಗೆ ಹುರಿಯಾಳುಗಳ ಹೆಸರನ್ನು ಅಖೈರುಗೊಳಿಸಿದೆ. ರಾಜ್ಯದ ಒಂಬತ್ತು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೊಸ ಮುಖಗಳಿಗೆ ಮಣೆ ಹಾಕುವ ಜತೆಗೆ ಪಕ್ಷದ ಹಿರಿಯ ನಾಯಕರ ಹಿರಿತನಕ್ಕೂ ಮನ್ನಣೆ ನೀಡಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನು ರಾಷ್ಟ್ರ ರಾಜಕಾರಣದಲ್ಲಿ ಬಳಸಿಕೊಳ್ಳಲು ವರಿಷ್ಠರು ತೀರ್ಮಾನಿಸಿದ್ದಾರೆ. ಅವರು ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪಕ್ಷವು 2023ರ ವಿಧಾನಸಭಾ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಿತ್ತು. ಚುನಾವಣೆಯಲ್ಲಿ 66 ಸ್ಥಾನಗಳಿಗೆ ತೃಪ್ತಿ ಪಟ್ಟಿತ್ತು. ಶಿಗ್ಗಾವಿಯಲ್ಲಿ ಗೆದ್ದಿದ್ದ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ವರಿಷ್ಠರು ಅವರ ಹೆಸರನ್ನು ಪರಿಗಣಿಸಿರಲಿಲ್ಲ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಅವರಿಗೆ ಕೊಕ್ ನೀಡಲಾಗಿದೆ. ಅವರ ಬದಲು ಗೌಡರ ತಾಲ್ಲೂಕಿನವರೇ (ಪುತ್ತೂರು) ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಉತ್ತರದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹಾವೇರಿ ಅಥವಾ ಧಾರವಾಡ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಮೊದಲ ಪಟ್ಟಿಯಲ್ಲಿ ಅವರ ಹೆಸರಿಲ್ಲ. ಅವರು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಯಾಗುವ ಸಂಭವ ಇದೆ. ಧಾರವಾಡ ಕ್ಷೇತ್ರದಿಂದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪರ್ಧಿಸಲಿದ್ದಾರೆ. ಅವರು ಈ ಹಿಂದೆ ನಾಲ್ಕು ಸಲ ಗೆಲುವು ಸಾಧಿಸಿದ್ದರು.

ಪಕ್ಷವು ಅಚ್ಚರಿಯ ಅಭ್ಯರ್ಥಿಯ ರೂಪದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ–ಚಿಕ್ಕಮಗಳೂರಿಗೆ ಹುರಿಯಾಳುವನ್ನಾಗಿ ಮಾಡಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ರಾಜ್ಯ ಘಟಕದ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲು ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ಮಣೆ ಹಾಕಲಾಗಿದೆ. ಕಟೀಲ್ ಅವರಿಗೆ ಟಿಕೆಟ್ ನೀಡುವುದಕ್ಕೆ ಪಕ್ಷದ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಬೀದರ್ ಕ್ಷೇತ್ರದಲ್ಲಿ ಸ್ಥಳೀಯ ನಾಯಕರ ವಿರೋಧದ ನಡುವೆಯೂ ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ಮೇಲೆ ವರಿಷ್ಠರು ಮತ್ತೊಮ್ಮೆ ಭರವಸೆ ಇಟ್ಟಿದ್ದಾರೆ. ಖೂಬಾ ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಸ್ವಪಕ್ಷೀಯ ಶಾಸಕರಾದ ಪ್ರಭು ಚವಾಣ್, ಶರಣು ಸಲಗರ, ಮಾಜಿ ಶಾಸಕ ಸುಭಾಷ ಕಲ್ಲೂರ ಪಟ್ಟು ಹಿಡಿದಿದ್ದರು. ಪ್ರಭು ಚವಾಣ್ ಅವರು ಪಕ್ಷದ ಸಮಾರಂಭದಲ್ಲೇ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು.

ಕುಟುಂಬ ರಾಜಕಾರಣಕ್ಕೆ ಮಣೆ: ಶಿವಮೊಗ್ಗ ಕ್ಷೇತ್ರದಲ್ಲಿ ಮೂರು ಸಲ ಗೆದ್ದಿರುವ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ. ರಾಘವೇಂದ್ರ ಸಹೋದರ ಬಿ.ವೈ. ವಿಜಯೇಂದ್ರ ಶಿಕಾರಿಪುರದ ಶಾಸಕ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ. ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಮತ್ತೆ ಕಣಕ್ಕೆ ಇಳಿಸಲಾಗಿದೆ. ಅವರ ಪತ್ನಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಯ ಶಾಸಕಿ. ದಾವಣಗೆರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಬದಲು ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರನ್ನು ಹುರಿಯಾಳುವನ್ನಾಗಿ ಆಯ್ಕೆ ಮಾಡಲಾಗಿದೆ. ಕುಟುಂಬ ರಾಜಕಾರಣದ ವಿರುದ್ಧ ನಿರಂತರ ವಾಗ್ದಾಳಿ ನಡೆಸುವ ಬಿಜೆಪಿ ವರಿಷ್ಠರು ಇಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದಾರೆ.

ದಾವಣಗೆರೆಯಲ್ಲಿ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರು ‘ಕೈ’ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಹೀಗಾಗಿ, ಬಿಜೆಪಿಯಿಂದ ಗಾಯತ್ರಿ ಅವರಿಗೆ ಅವಕಾಶ ನೀಡಲಾಗಿದೆ. ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡುವುದಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸೇರಿ ಹಲವು ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅವರ ‘ಬಂಡಾಯ’ದ ಬೆದರಿಕೆಗೆ ವರಿಷ್ಠರು ಕಿಮ್ಮತ್ತು ನೀಡಿಲ್ಲ.

ಕೊಪ್ಪಳ ಕ್ಷೇತ್ರದಿಂದ ಸತತ ಎರಡು ಬಾರಿ ಬಿಜೆಪಿಯಿಂದ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಲಭಿಸಿಲ್ಲ. ಅವರ ಬದಲು ವೃತ್ತಿಯಲ್ಲಿ ವೈದ್ಯರಾಗಿರುವ ಬಸವರಾಜ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕರಡಿ ಸಂಗಣ್ಣ ಅವರ ಪುತ್ರ ಅಮರೇಶ ಕರಡಿ ಅವರಿಗೆ ಕೊಪ್ಪಳದಲ್ಲಿ ಟಿಕೆಟ್ ನೀಡಲಾಗಿತ್ತು. 2023ರ ವಿಧಾನಸಭಾ ಚುನಾವಣೆಯಲ್ಲಿ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಬೇಕು ಎಂದು ಕರಡಿ ಪಟ್ಟು ಹಿಡಿದಿದ್ದರು. ಅವರು ಜೆಡಿಎಸ್ಗೆ ಸೇರಲಿದ್ದಾರೆ ಎಂಬ ಸುದ್ದಿಗಳು ಹರಡಿದ್ದರು. ಅವರ ಒತ್ತಡಕ್ಕೆ ಮಣಿದು ಸೊಸೆ ಮಂಜುಳಾ ಕರಡಿ ಅವರನ್ನು ಹುರಿಯಾಳುವನ್ನಾಗಿ ಮಾಡಲಾಗಿತ್ತು. ಅವರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಕರಡಿ ವಿಫಲರಾಗಿದ್ದರು.

ಬಳ್ಳಾರಿ(ಎಸ್ಟಿ ಮೀಸಲು) ಕ್ಷೇತ್ರದಿಂದ ನಿರೀಕ್ಷೆಯಂತೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲಾಗಿದೆ. 2014ರಲ್ಲಿ ಒಮ್ಮೆ ಲೋಕಸಭೆ ಪ್ರವೇಶಿಸಿದ್ದ ಶ್ರೀರಾಮುಲು ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಬಿ.ನಾಗೇಂದ್ರ ವಿರುದ್ಧ ಅವರು ಸೋತಿದ್ದರು.

ಹಿರಿತನಕ್ಕೆ ಮನ್ನಣೆ: ದಲಿತ ಸಮುದಾಯದ ಪ್ರಭಾವಿ ನಾಯಕ ರಮೇಶ ಜಿಗಜಿಗಣಿ ಅವರನ್ನು ವಿಜಯಪುರ ಕ್ಷೇತ್ರದಿಂದ ಮತ್ತೆ ಕಣಕ್ಕೆ ಇಳಿಸಲಾಗಿದೆ. 1998ರಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿದ್ದ ಅವರು ಬಳಿಕ ವಿಜಯಪುರ ಕ್ಷೇತ್ರಕ್ಕೆ ಸ್ಥಳಾಂತರಗೊಂಡಿದ್ದರು. ಬಳಿಕ ಅವರು ಸೋತಿದ್ದೇ ಇಲ್ಲ. ಅದೇ ರೀತಿ, ಬಾಗಲಕೋಟೆ ಕ್ಷೇತ್ರದಲ್ಲಿ 2004ರಿಂದ ಗೆಲ್ಲುತ್ತಾ ಬಂದಿರುವ ಸಂಸದ ಪಿ.ಸಿ.ಗದ್ದಿಗೌಡರ ಅವರ ಮೇಲೆ ವರಿಷ್ಠರು ಮತ್ತೆ ವಿಶ್ವಾಸ ಇರಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಉನ್ನತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಉಮೇಶ ಜಾಧವ ಸೋಲಿಸಿದ್ದರು. ಈ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದರು. ನಿರೀಕ್ಷೆಯಂತೆ ಮತ್ತೆ ಅವರಿಗೆ ಟಿಕೆಟ್ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.