ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

Published 30 ಮೇ 2024, 16:26 IST
Last Updated 30 ಮೇ 2024, 16:26 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬಿದ್ದಿತು. ಈ ಬಾರಿ ಒಟ್ಟು 75 ದಿನ ಬಹಿರಂಗ ಪ್ರಚಾರ ನಡೆದಿದ್ದು, 1951–52ರ ಲೋಕಸಭಾ ಚುನಾವಣೆ ಬಳಿಕ ಇಷ್ಟು ಸುದೀರ್ಘ ಅವಧಿಯ ಪ್ರಚಾರ ನಡೆದಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. 

ಶನಿವಾರ (ಜೂನ್‌ 1) ನಡೆಯಲಿರುವ ಕೊನೆಯ ಹಂತದಲ್ಲಿ ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ (ಚಂಡೀಗಢ) ಒಟ್ಟು 57 ಲೋಕಸಭಾ ಕ್ಷೇತ್ರಗಳ ಮತದಾರರು ಹಕ್ಕು ಚಲಾಯಿಸಲಿದ್ದಾರೆ. 

ಪಂಜಾಬ್‌ನ ಎಲ್ಲ 13 ಕ್ಷೇತ್ರಗಳು, ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಿರುವ ವಾರಾಣಸಿ ಸೇರಿದಂತೆ ಉತ್ತರ ಪ್ರದೇಶದ 13, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ 3 ಹಾಗೂ ಚಂಡೀಗಢದ ಒಂದು ಕ್ಷೇತ್ರಗಳಿಗೆ ಮತದಾನ ನಿಗದಿಯಾಗಿದೆ.

ಮೊದಲ ಆರು ಹಂತಗಳಲ್ಲಿ ಒಟ್ಟು 486 ಕ್ಷೇತ್ರಗಳಿಗೆ ಮತದಾನ ಮುಗಿದಿದೆ. ಎಲ್ಲ 543 ಕ್ಷೇತ್ರಗಳ ಮತ ಎಣಿಕೆ ಜೂನ್‌ 4ರಂದು ನಡೆಯಲಿದೆ.

ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೊನೆಯ ‌ದಿನ ಪಂಜಾಬ್‌ನಲ್ಲಿ ಪ್ರಚಾರ ಕೈಗೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT