ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಾಂತ್ಯಕ್ಕೆ‘ಇಂಡಿಯಾ’ ಬಣದ ಸೀಟು ಹಂಚಿಕೆ ಸೂತ್ರ ಅಂತಿಮಗೊಳಿಸಲಿರುವ ಕಾಂಗ್ರೆಸ್

Published 5 ಜನವರಿ 2024, 3:01 IST
Last Updated 5 ಜನವರಿ 2024, 3:01 IST
ಅಕ್ಷರ ಗಾತ್ರ

ನವದೆಹಲಿ: ಸೀಟು ಹಂಚಿಕೆ ಸೂತ್ರ ಅಂತಿಮಗೊಳಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೀಡಿದ್ದ ಡಿ.31ರ ಗಡುವನ್ನು ಮೀರಿರುವ ಕಾಂಗ್ರೆಸ್, ಇದೇ ತಿಂಗಳಾಂತ್ಯಕ್ಕೆ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಳಿಸುವ ನಿರೀಕ್ಷೆ ಇದೆ.

ರಾಷ್ಟ್ರೀಯ ಮೈತ್ರಿ ಸಮಿತಿಯು ಪಕ್ಷದ ರಾಜ್ಯ ಘಟಕಗಳ ಜೊತೆ ಸೀಟು ಹಂಚಿಕೆ ಕುರಿತು ಚರ್ಚೆ ಪೂರ್ಣಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿಯನ್ನು ಸಲ್ಲಿಸಿದೆ. ಯಾವ ರಾಜ್ಯಗಳಲ್ಲಿ ಪಕ್ಷವು ಮುಂಚೂಣಿಯಲ್ಲಿಲ್ಲ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಮಿತ್ರಪಕ್ಷಗಳೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಿದರೆ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆಲ್ಲುವ ಅವಕಾಶವಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ನಡೆದ ಸಭೆಯಲ್ಲಿ ಹೇಳಿದ್ದರು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ಅಭ್ಯರ್ಥಿ ಘೋಷಣೆ ಸಂಬಂಧ ‘ಇಂಡಿಯಾ’ ಮೈತ್ರಿಕೂಟದ ನಾಯಕರಲ್ಲಿ ಗೊಂದಲ ಮೂಡಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪ್ರಧಾನಿ ಅಭ್ಯರ್ಥಿಯಾಗುವುದಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಅಸಮ್ಮತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಮೈತ್ರಿಕೂಟದ ಸೀಟು ಹಂಚಿಕೆಯ ಬಗ್ಗೆ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ರಾಜ್ಯಗಳಲ್ಲಿ ನಾಯಕರ ನಡುವೆ ವಾಗ್ವಾದಗಳು ನಡೆದಿವೆ.

ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮವಾಗುವವರೆಗೆ ಯಾವುದೇ ಜಂಟಿ ಕಾರ್ಯಕ್ರಮದ ಭಾಗವಾಗಲು ಸಾಧ್ಯವಿಲ್ಲ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖರ್ಗೆ ಅವರನ್ನು ಸಂಭಾವ್ಯ ಪ್ರಧಾನಿ ಅಭ್ಯರ್ಥಿ ಅಥವಾ ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ಸೂಚಿಸಿದ್ದರು. ಮಮತಾ ಬ್ಯಾನರ್ಜಿ ವಾದವನ್ನು ಬೆಂಬಲಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಖರ್ಗೆ ಅವರ ಉಮೇದುವಾರಿಕೆಯು ಕನಿಷ್ಠ 58 ಸ್ಥಾನಗಳ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT