ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರದಲ್ಲಿ 3ನೇ ವ್ಯಕ್ತಿ ಕಣಕ್ಕಿಳಿದರೆ ಕಾಂಗ್ರೆಸ್‌ ಗೆಲ್ಲಲ್ಲ: ಮುನಿಯಪ್ಪ

Published 29 ಮಾರ್ಚ್ 2024, 12:41 IST
Last Updated 29 ಮಾರ್ಚ್ 2024, 12:41 IST
ಅಕ್ಷರ ಗಾತ್ರ

ʼನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲʼ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಲವರು ಕಾಂಗ್ರೆಸ್‌ ಪಕ್ಷಕ್ಕೆ ಬಂದರು. ಪಕ್ಷ ಗೆಲ್ಲಬೇಕು ಎಂಬ ಕಾರಣಕ್ಕೆ ನಾನು ಯಾರನ್ನೂ ವಿರೋಧಿಸಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಯಾರ ವಿರುದ್ಧವೂ ಕೆಲಸ ಮಾಡಿಲ್ಲ. ರಮೇಶ್‌ ಕುಮಾರ್‌ ಮತ್ತು ನನ್ನ ಮಧ್ಯೆ ಸಮಸ್ಯೆ ಪರಿಹರಿಸುವಂತೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾನೇ ಮನವಿ ಮಾಡಿದ್ದೆʼ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT