ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಶನಿವಾರ ಮುಕ್ತಾಯವಾಗಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಒಟ್ಟು 59.06ರಷ್ಟು ಮತದಾನ ಆಗಿದೆ.

ದೇಶದ ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು.

ಹಿಂಸಾಚಾರದ ವರದಿಗಳ ನಡುವೆಯೂ ಪಶ್ಚಿಮ ಬಂಗಾಳದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಶೇ 78.19ರಷ್ಟು ಮತದಾನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್– ರಜೌರಿ ಲೋಕಸಭಾ ಕ್ಷೇತ್ರದಲ್ಲಿ 52.28ರಷ್ಟು ಮತದಾನ ಆಗಿದ್ದು, ಹಲವು ದಶಕಗಳಲ್ಲಿ ನಡೆದಿರುವ ಅತ್ಯಧಿಕ ಮತದಾನ ಪ್ರಮಾಣ ಇದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಪ್ರಮುಖರು ತಮ್ಮ ಮತದಾನದ ಹಕ್ಕುನ್ನು ದೆಹಲಿಯಲ್ಲಿ ಚಲಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.