ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ | ಸೀಟು ಹಂಚಿಕೆ ಕುರಿತು ಎಎಪಿ ಜೊತೆ ಮತ್ತೊಮ್ಮೆ ಸಭೆ: ಕಾಂಗ್ರೆಸ್

Published 8 ಜನವರಿ 2024, 12:38 IST
Last Updated 8 ಜನವರಿ 2024, 12:38 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್‌ ಇಂದು (ಸೋಮವಾರ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಿವೆ.

ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್‌ ಸಂಸದ ಮುಕುಲ್‌ ವಾಸ್ನಿಕ್‌, ‘ಚುನಾವಣೆಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತಂತೆ ಎಲ್ಲವನ್ನೂ ವಿವರವಾಗಿ ಚರ್ಚಿಸಲಾಗಿದೆ. ಈ ಕುರಿತು ನಾವು ಮತ್ತೆ ಭೇಟಿಯಾಗಿ ಚರ್ಚಿಸಲಿದ್ದೇವೆ. ಆ ನಂತರವೇ ಸೀಟು ಹಂಚಿಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನಾವು ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ ಮತ್ತು ಬಿಜೆಪಿಗೆ ತಕ್ಕ ಉತ್ತರವನ್ನು ನೀಡುತ್ತೇವೆ’ ಎಂದು ಹೇಳಿದರು.

ಎಎಪಿ ರಾಜ್ಯಸಭಾ ಸಂಸದ ಸಂದೀಪ್‌ ಪಾಠಕ್‌, ದೆಹಲಿ ಕ್ಯಾಬಿನೆಟ್‌ ಸಚಿವರಾದ ಅತಿಶಿ ಮತ್ತು ಸೌರಭ್‌ ಭಾರಧ್ವಜ್‌, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌, ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT