ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ನಿತಿನ್‌ ಗಡ್ಕರಿ, ಖಟ್ಟರ್‌ಗೆ ಕಮಲ ಟಿಕೆಟ್‌

Published 14 ಮಾರ್ಚ್ 2024, 0:15 IST
Last Updated 14 ಮಾರ್ಚ್ 2024, 0:15 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಬುಧವಾರ ಪ್ರಕಟಿಸಿದೆ. ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ, ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌, ಕೇಂದ್ರ ವಾರ್ತಾ ಸಚಿವ ಅನುರಾಗ್‌ ಠಾಕೂರ್‌ ಹಾಗೂ ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಇಬ್ಬರು ಮಾಜಿ ಮುಖ್ಯಮಂತ್ರಿಗಳು, ರೈಲ್ವೆ ಖಾತೆಯ ರಾಜ್ಯ ಸಚಿವ ದರ್ಶನ್‌ ಜರ್ದೋಶ್ ಸೇರಿದಂತೆ 30 ಸಂಸದರಿಗೆ ಮತ್ತೆ ಸ್ಪರ್ಧಿಸಲು ಅವಕಾಶ ನಿರಾಕರಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಖಟ್ಟರ್, ಬಸವರಾಜ ಬೊಮ್ಮಾಯಿ ಹಾಗೂ ತ್ರಿವೇಂದ್ರ ಸಿಂಗ್‌ ರಾವತ್‌ ಅವರ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲು ವೇದಿಕೆ ಸನ್ನದ್ಧವಾಗಿದೆ. ರಾಜ್ಯಸಭಾ ಸದಸ್ಯರಾಗಿರುವ ಪೀಯೂಷ್‌ ಅವರು ಮುಂಬೈ ಉತ್ತರದಿಂದ ಕಣಕ್ಕಿಳಿಯಲಿದ್ದಾರೆ. ಪಕ್ಷದ ಮುಖ್ಯ ವಕ್ತಾರರೂ ಆಗಿರುವ ರಾಜ್ಯಸಭಾ ಸದಸ್ಯ ಅನಿಲ್‌ ಬಲೂನಿ ಅವರು ಉತ್ತರಾಖಂಡದ ಗರ್ವಾಲ್‌ನಿಂದ ಸ್ಪರ್ಧೆ ಮಾಡಲಿದ್ದಾರೆ. 

ಪೂರ್ವ ದೆಹಲಿ ಕ್ಷೇತ್ರದಿಂದ ಮಾಜಿ ಮೇಯರ್ ಹರ್ಷ್‌ ಮಲ್ಹೋತ್ರಾ ಹಾಗೂ ವಾಯವ್ಯ ಕ್ಷೇತ್ರದಿಂದ ಯೋಗೇಂದ್ರ ಚಂದೋಲಿಯಾ ಅವರನ್ನು ಹುರಿಯಾಳುಗಳನ್ನಾಗಿ ಮಾಡಲಾಗಿದೆ. ಹಾಲಿ ಸಂಸದ ಹನ್ಸ್‌ ರಾಜ್‌ ಹನ್ಸ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ಕ್ರಿಕೆಟಿಗ ಗೌತಮ್‌ ಗಂಭೀರ್ ಅವರು ಚುನಾವಣಾ ರಾಜಕಾರಣಕ್ಕೆ ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಈ ಮೂಲಕ, ದೆಹಲಿಯಲ್ಲಿ ಏಳು ಸಂಸದರ ಪೈಕಿ ಆರು ಮಂದಿಗೆ ಟಿಕೆಟ್‌ ನಿರಾಕರಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT