ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಅಮಿತ್‌ ಷಾ ಭೇಟಿಯಾದ ಸಚಿವ ಭಗವಂತ ಖೂಬಾ

Published 8 ಫೆಬ್ರುವರಿ 2024, 12:40 IST
Last Updated 8 ಫೆಬ್ರುವರಿ 2024, 12:40 IST
ಅಕ್ಷರ ಗಾತ್ರ

ಬೀದರ್‌: ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದರು.

‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಅಂಗವಾಗಿ ಬೀದರ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಮುಂಬರುವ ಚುನಾವಣೆಗೆ ಸಿದ್ಧತೆ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಅಮಿತ್‌ ಷಾ ಅವರಿಗೆ ವಿವರಿಸಿದ್ದು, ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಖೂಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ರಾಜ್ಯ ಹಾಗೂ ಬೀದರ್‌ ಲೋಕಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರ ಸರ್ಕಾರದ ಕೆಲಸಗಳಿಂದ ಜನರಲ್ಲಿ ಉತ್ತಮ ಭಾವನೆ ಇದ್ದು, ಮತ್ತೊಮ್ಮೆ ಬಿಜೆಪಿಯನ್ನು ಜನ ಬೆಂಬಲಿಸಲಿದ್ದಾರೆ ಎಂದು ವಿವರಿಸಿದ್ದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT