ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶುಪತಿ ಪಾರಸ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Published 20 ಮಾರ್ಚ್ 2024, 6:03 IST
Last Updated 20 ಮಾರ್ಚ್ 2024, 6:03 IST
ಅಕ್ಷರ ಗಾತ್ರ

ನವದೆಹಲಿ: ಪಶುಪತಿ ಪಾರಸ್‌ ಅವರು ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಅಂಗೀಕರಿಸಿದ್ದಾರೆ.

ಪಶುಪತಿ ಪಾರಸ್‌ ನೇತೃತ್ವದ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವು ಮಂಗಳವಾರ ಎನ್‌ಡಿಎ ಬಣವನ್ನು ತೊರೆದಿದ್ದು, ಪಾರಸ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಸೀಟು ಹಂಚಿಕೆ ವೇಳೆ ಬಿಜೆಪಿಯು ಪಶುಪತಿ ಅವರನ್ನು ಕಡೆಗಣಿಸಿ, ಅವರ ಅಣ್ಣನ ಮಗ ಚಿರಾಗ್‌ ಪಾಸ್ವಾನ್‌ ನೇತೃತ್ವದ ಪಕ್ಷಕ್ಕೆ ಮಣೆ ಹಾಕಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ರಾಜೀನಾಮೆ ನೀಡಿದ್ದಾರೆ.

ನಮ್ಮ ಪಕ್ಷದ ಐವರು ಹಾಲಿ ಸಂಸದರು ಇದ್ದು, ನಾನು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೂ ನನಗೆ ಹಾಗೂ ಪಕ್ಷಕ್ಕೆ ಅನ್ಯಾಯ ಮಾಡಲಾಗಿದೆ. ಈ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪಾರಸ್‌ ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಜೆಡಿಯು ಕ್ರಮವಾಗಿ 17 ಹಾಗೂ 16 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಚಿರಾಗ್‌ ಪಾಸ್ವಾನ್‌ ಬಣಕ್ಕೆ ಐದು ಕ್ಷೇತ್ರಗಳನ್ನು ನೀಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT