ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ: ಬಹಿರಂಗ ಪ್ರಚಾರಕ್ಕೆ ತೆರೆ

Published 30 ಮೇ 2024, 13:52 IST
Last Updated 30 ಮೇ 2024, 13:52 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿರುವ 57 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ.

ಪಂಜಾಬ್‌ ಹಾಗೂ ಉತ್ತರ ಪ್ರದೇಶದ ತಲಾ 13 ಕ್ಷೇತ್ರಗಳು, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ 3, ಚಂಡೀಗಢದ 1 ಕ್ಷೇತ್ರಕ್ಕೆ ನಾಳೆ (ಜೂನ್‌ 1 ರಂದು) ಮತದಾನ ನಡೆಯಲಿದೆ.

ಇದರೊಂದಿಗೆ ದೇಶದಾದ್ಯಂತ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಂತಾಗಲಿದೆ.

ಎಲ್ಲ ಹಂತಗಳ ಒಟ್ಟು 543 ಕ್ಷೇತ್ರಗಳ ಫಲಿತಾಂಶ ಜೂನ್‌ 4ರಂದು ಹೊರಬೀಳಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT