ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 32 ವರ್ಷದ ಯೋಧರೊಬ್ಬರು ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್ (ಯುಬಿಜಿಎಲ್) ಸ್ಫೋಟಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಸೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಲ್ಗಾಮ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಸ್ಫೋಟ ಸಂಬಂಧ ತಜ್ಞರ ತಂಡ ಹಾಗೂ ಭದ್ರತಾ ಸಿಬ್ಬಂದಿಯು ಮತಗಟ್ಟೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರದೇಶವು ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ.

ಮೃತ ಯೋಧನನ್ನು ಸಿಆರ್‌ಪಿಎಫ್‌ನ 196ನೇ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ದೇವೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಅವರನ್ನು ಜಗದಲ್‌ಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.