ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ ಟಿಕೆಟ್ ನಿರಾಕರಣೆ: ಹರ್ಷವರ್ಧನ್ ರಾಜಕೀಯಕ್ಕೆ ವಿದಾಯ

Published 3 ಮಾರ್ಚ್ 2024, 10:59 IST
Last Updated 3 ಮಾರ್ಚ್ 2024, 10:59 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಕೇಂದ್ರ ಸಚಿವ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಹರ್ಷವರ್ಧನ್, ಭಾನುವಾರ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ.

ಲೋಕಸಭಾ ಚುನಾವಣೆಗಾಗಿ ಆಡಳಿತಾರೂಢ ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಪ್ರಕಟಿಸಿತ್ತು. ಆದರೆ ಹಾಲಿ ಸಂಸದ ಹರ್ಷವರ್ಧನ್‌ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಇದೇ ಕಾರಣಕ್ಕೆ ರಾಜಕೀಯ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹರ್ಷವರ್ಧನ್‌ ಅವರು ದೆಹಲಿಯ ಚಾಂದಿನಿ ಚೌಕ್ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ಈ ಸಲ ಹರ್ಷವರ್ಧನ್ ಬದಲು ಬಿಜೆಪಿ ಪ್ರವೀಣ್ ಖಂಡೇಲವಾಲ್‌ ಅವರಿಗೆ ಟಿಕೆಟ್ ನೀಡಿತ್ತು.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಹರ್ಷವರ್ಧನ್ ಅವರು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಅದೇ ವೇಳೆ ತಮ್ಮೆಲ್ಲ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಮತ್ತೆ ಗೆದ್ದು ಬರಲಿ ಎಂದೂ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT