ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha elections 2024: ದೇಶದಲ್ಲಿ ಈಗ 97 ಕೋಟಿ ಮತದಾರರು

Published 9 ಫೆಬ್ರುವರಿ 2024, 10:42 IST
Last Updated 9 ಫೆಬ್ರುವರಿ 2024, 10:42 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಸುಮಾರು 97 ಕೋಟಿ ಮತದಾರರು ಅರ್ಹರಾಗಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಸಲದ ಚುನಾವಣೆಗೆ 18ರಿಂದ 29 ವರ್ಷದೊಳಗಿನ ಎರಡು ಕೋಟಿಗೂ ಹೆಚ್ಚು ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ ಎಂದು ಅದು ಹೇಳಿದೆ.

ಲೋಕಸಭೆಗೆ 2019ರಲ್ಲಿ ನಡೆದಿದ್ದ ಚುನಾವಣೆಗಿಂತಲೂ ನೋಂದಾಯಿತ ಮತದಾರರಲ್ಲಿ ಶೇ 6ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಲಿಂಗಾನುಪಾತವು 2023ರಲ್ಲಿ ಪ್ರತಿ ಸಾವಿರ ಪುರುಷರಿಗೆ 940 ಮಹಿಳೆಯರು ಇದ್ದರು. 2024ರಲ್ಲಿ ಈ ಸಂಖ್ಯೆ 948ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT