ಬೆಂಗಳೂರು: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಸೋಮವಾರ(ಮೇ 13) ಆರಂಭವಾಗಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.
ಆಂಧ್ರಪ್ರದೇಶ (25) ಮತ್ತು ತೆಲಂಗಾಣದ (17) ಎಲ್ಲ ಕ್ಷೇತ್ರಗಳಲ್ಲದೆ ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಳದ ತಲಾ 8, ಬಿಹಾರದ 8, ಜಮ್ಮು ಮತ್ತು ಕಾಶ್ಮೀರದ 1, ಒಡಿಶಾ ಮತ್ತು ಜಾರ್ಖಂಡ್‌ನ ತಲಾ 4 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.