ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ | ಎಎಪಿ-ಕಾಂಗ್ರೆಸ್ ಮೈತ್ರಿ; ಸೀಟು ಹಂಚಿಕೆ ಅಂತಿಮ ಹಂತಕ್ಕೆ: ಮೂಲಗಳು

Published 22 ಫೆಬ್ರುವರಿ 2024, 9:40 IST
Last Updated 22 ಫೆಬ್ರುವರಿ 2024, 9:40 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹಾಗೂ ಕಾಂಗ್ರೆಸ್ ನಡುವಣ ಸೀಟು ಹಂಚಿಕೆ ಸಂಬಂಧ ಅಂತಿಮ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ತಲುಪಿದೆ. ಇದರಿಂದ ಮೈತ್ರಿಗೆ ಎದುರಾಗಿರುವ ತೊಡಕು ನಿವಾರಣೆಯಾಗಿದೆ. ಸೀಟು ಹಂಚಿಕೆ ಸಂಬಂಧ ಎರಡೂ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬಂದಿವೆ ಎಂದು ಹೇಳಲಾಗಿದೆ.

ದಕ್ಷಿಣ ದೆಹಲಿ, ಪಶ್ಚಿಮ ದೆಹಲಿ, ವಾಯುವ್ಯ ದೆಹಲಿ ಮತ್ತು ನವದೆಹಲಿ ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಚಾಂದಿನಿ ಚೌಕ್, ಪೂರ್ವ ದೆಹಲಿ ಮತ್ತು ಈಶಾನ್ಯ ದೆಹಲಿ ಕ್ಷೇತ್ರಗಳಿಂದ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಎಎಪಿ ಪಕ್ಷದ ಮೂಲಗಳು ತಿಳಿಸಿವೆ.

ಇದರಿಂದ ನಾಲ್ಕು ಸ್ಥಾನಗಳಲ್ಲಿ ಎಎಪಿ ಮತ್ತು ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸುವ ಸಾಧ್ಯತೆಯಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT