ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಎನ್‌ಡಿಎಗೆ ಜನರ ಬೆಂಬಲ ಬಲಗೊಳ್ಳುತ್ತಿದೆ: ಪ್ರಧಾನಿ ಮೋದಿ

Published 21 ಮೇ 2024, 8:48 IST
Last Updated 21 ಮೇ 2024, 8:48 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಬೇಕು ಎಂದು ಜನರು ಬಯಸುತ್ತಿದ್ದಾರೆ. ಆದ್ದರಿಂದ ಎನ್‌ಡಿಎಗೆ ಜನರ ಬೆಂಬಲದ ಅಲೆಯು ಬಲಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸಿದವರಿಗೆ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡುವ ಮೂಲಕ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು.

‘ಇಂಡಿಯಾ’ ಒಕ್ಕೂಟವು ಯಾವುದೇ ರೀತಿಯ ಮತ ಬ್ಯಾಂಕ್‌ ರಾಜಕೀಯ ನಡೆಸಿದರೂ ಜನರು ಅವರನ್ನು ನಂಬುವುದಿಲ್ಲ. ಅವರು ಸಂಪೂರ್ಣವಾಗಿ ಅಪಖ್ಯಾತಿಗೆ ಒಳಗಾಗಿದ್ದಾರೆ ಮತ್ತು ಹತಾಶರಾಗಿದ್ದಾರೆ. ಎನ್‌ಡಿಎಗೆ ಜನರ ಬೆಂಬಲದ ಅಲೆಯು ಬಲಗೊಳ್ಳುತ್ತಿದೆ. ದೇಶದ ಜನರು ಕೇಂದ್ರದಲ್ಲಿ ಬಲಿಷ್ಠ ಎನ್‌ಡಿಎ ಸರ್ಕಾರವನ್ನು ನೋಡಲು ಬಯಸಿದ್ದಾರೆ ಎಂದು ತಿಳಿಸಿದ್ದಾರೆ.

ಆರು ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಐದನೇ ಹಂತದಲ್ಲಿ ಮತದಾನ ನಡೆದಿದ್ದು, ಶೇ 60.09ರಷ್ಟು ಮತದಾನವಾಗಿದೆ. ಮೇ 25 ಮತ್ತು ಜೂನ್‌ 1ರಂದು ಇನ್ನುಳಿದ ಎರಡು ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT