ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ: 3.4 ಲಕ್ಷ ಸಿಎಪಿಎಫ್ ಸಿಬ್ಬಂದಿ ನಿಯೋಜನೆಗೆ ಇಸಿ ಮನವಿ

Published 15 ಫೆಬ್ರುವರಿ 2024, 4:58 IST
Last Updated 15 ಫೆಬ್ರುವರಿ 2024, 4:58 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಾಗಿ  3.4 ಲಕ್ಷ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ( ಸಿಎಪಿಎಫ್ ) ಸಿಬ್ಬಂದಿಯನ್ನು ನಿಯೋಜಿಸಲು ಚುನಾವಣಾ ಆಯೋಗವು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಿಎಪಿಎಫ್  ಸಿಬ್ಬಂದಿಯನ್ನು ಹಂತ ಹಂತವಾಗಿ ನಿಯೋಜಿಸಲು ಮತ್ತು ಸಿಬ್ಬಂದಿಯು ಚುನಾವಣಾ ಕರ್ತವ್ಯಕ್ಕೆ ಹಾಜರಾಗಲು ಸೌಲಭ್ಯಗಳನ್ನು ಒದಗಿಸುವಂತೆಯೂ ಚುನಾವಣಾ ಆಯೋಗ(ಇ.ಸಿ) ತಿಳಿಸಿದೆ.

ಸ್ಟ್ರಾಂಗ್ ರೂಮ್ ಕೇಂದ್ರಗಳ ಬಳಿ, ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಸುರಕ್ಷತೆ, ಮತ ಎಣಿಕೆ ಸಂದರ್ಭಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವುದು ಅಗತ್ಯವಾಗಿದೆ. ಹೀಗಾಗಿ ಸುಮಾರು 3.4 ಲಕ್ಷ ಸಿಎಪಿಎಫ್ ಸಿಬ್ಬಂದಿ ನಿಯೋಜನೆ ಮಾಡುವಂತೆ ಚುನಾವಣಾ ಆಯೋಗವು ಗೃಹ ಸಚಿವಾಲಯಕ್ಕೆ ಹೇಳಿದೆ.

ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿವೆ.

CAPF ಎಂದರೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯಾಗಿದ್ದು, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF), ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF), ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಸಶಸ್ತ್ರ ಸೀಮಾ ಬಲ (SSB) ಮತ್ತು ನ್ಯಾಷನಲ್ ಸೆಕ್ಯುರಿಟಿ ಗಾರ್ಡ್ (NSG) ಯನ್ನು ಒಳಗೊಂಡಿರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT