ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರದ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ: ಮಸೂದೆಗೆ ಲೋಕಸಭೆ ಅಸ್ತು

Published 6 ಫೆಬ್ರುವರಿ 2024, 11:30 IST
Last Updated 6 ಫೆಬ್ರುವರಿ 2024, 11:30 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಒದಗಿಸುವ ಮಸೂದೆಯನ್ನು ಲೋಕಸಭೆ ಮಂಗಳವಾರ ಅಂಗೀಕರಿಸಿದೆ.

2019ರಲ್ಲಿ 370ನೇ ವಿಧಿಯಡಿ ನೀಡಲಾಗಿದ್ದ ಸ್ಥಾನಮಾನ ಹಿಂಪಡೆದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರಮುಖ ಬದಲಾವಣೆಗಳು ನಡೆದಿವೆ ಎಂದು ಸರ್ಕಾರ ಪ್ರತಿಪಾದಿಸಿದೆ.

ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆ–2024ರ ಮೇಲೆ ಚುಟುಕು ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ‘ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಫಲವನ್ನು ಜಮ್ಮು ಮತ್ತು ಕಾಶ್ಮೀರದ ಜನ ಅನುಭವಿಸುತ್ತಿದ್ದಾರೆ ’ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಪಂಚಾಯಿತಿಗಳು ಮತ್ತು ಪುರಸಭೆಗಳಲ್ಲಿ ಒಬಿಸಿಗೆ ಮೀಸಲಾತಿ ಇಲ್ಲ. ಈ ಹೊಸ ತಿದ್ದುಪಡಿ ಮಸೂದೆಯು ಅಲ್ಲಿ ಮೀಸಲಾತಿ ಕಲ್ಪಿಸಲಿದೆ.

‘ಈ ಮೂಲಕ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದ ಇತರೆ ಹಿಂದುಳಿದ ವರ್ಗಗಳ ಜನರಿಗೆ ನ್ಯಾ ಸಿಕ್ಕಂತಾಗಿದೆ’ ಎಂದೂ ಅವರು ಹೇಳಿದ್ದಾರೆ.

ಇದೇವೇಳೆ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಕುರಿತಂತೆ ವಿಪಕ್ಷಗಳ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ‘ಜಮ್ಮು ಮತ್ತು ಕಾಶ್ಮೀರದ ಪಂಚಾಯಿತಿಗಳು ಮತ್ತು ಪುರಸಭೆಗಳಲ್ಲಿ ಒಬಿಸಿಗೆ ಮೀಸಲಾತಿ ನೀಡುವ ಮಸೂದೆ ಮೇಲಿನ ಚರ್ಚೆ ವೇಳೆ ನಾಟಕ ಮಾಡಲು ವಿಪಕ್ಷಗಳ ಸದಸ್ಯರು ಸೇರಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ನೀವು ಎಷ್ಟೇ ಸುತ್ತು ಹಾಕಿದರೂ ಜಮ್ಮು ಮತ್ತು ಕಾಶ್ಮೀರದಲ್ಲಿ ನಿಮಗೆ ಕೇಳಿಸುವುದು ಮೋದಿ, ಮೋದಿ ಎಂಬ ಶಬ್ಧ, ಕಾಣುವುದು ಮೋದಿ ಮಾಡಿರುವ ಅಭಿವೃದ್ಧಿ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT