ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಗ್ಯಾರಂಟಿಯು ಪರಿಶುದ್ಧ ಚಿನ್ನದಂತೆ: ಸಚಿವ ರಾಜನಾಥ್‌ ಸಿಂಗ್‌

Published 14 ಏಪ್ರಿಲ್ 2024, 13:19 IST
Last Updated 14 ಏಪ್ರಿಲ್ 2024, 13:19 IST
ಅಕ್ಷರ ಗಾತ್ರ

ನವದೆಹಲಿ: ‘ಬಿಜೆಪಿ ತಾನು ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಜನರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ. ಪ್ರಧಾನಿ ಮೋದಿಯವರ ಗ್ಯಾರಂಟಿಯು ಪರಿಶುದ್ಧ ಚಿನ್ನದಂತೆ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾರ ಹೇಳಿದ್ದಾರೆ.

ಪಕ್ಷದ ‘ಸಂಕಲ್ಪ ಪತ್ರ’ ಬಿಡುಗಡೆ ಬಳಿಕ ಮಾತನಾಡಿದ ಸಿಂಗ್‌, ಬಿಜೆಪಿಯ ಪ್ರಣಾಳಿಕೆಯು ವಿಶ್ವ ರಾಜಕೀಯದಲ್ಲಿ ಚಿನ್ನದಂತೆ ವಿಶಿಷ್ಟತೆಯಿಂದ ಕೂಡಿದೆ ಎಂದರು.

ಮಹಿಳಾ ಮೀಸಲಾತಿ ಜಾರಿ, ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದಿರುವುದು, ರಾಮ ಮಂದಿರ ನಿರ್ಮಾಣ ಸೇರಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಆಡಳಿತರೂಢ ಬಿಜೆಪಿ ಪಕ್ಷವು ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದ್ದಾರೆ.

ಪ್ರಣಾಳಿಕೆ ಸಮಿತಿಯು 15 ಲಕ್ಷಕ್ಕೂ ಹೆಚ್ಚು ಜನರ ಸಲಹೆಗಳನ್ನು ಸ್ವೀಕರಿಸಿದೆ ಎಂದು ಸಿಂಗ್ ಹೇಳಿದ್ದಾರೆ.

ಲೋಕಸಭೆ ಚುನಾವಣಾ ಸಂಬಂಧ ರಾಜನಾಥ್‌ ಸಿಂಗ್ ಅವರು ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT