ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ₹15 ಸಾವಿರ ಕೋಟಿ ಪರಿಹಾರ: ಏಕನಾಥ ಶಿಂದೆ

Published 24 ಏಪ್ರಿಲ್ 2024, 14:03 IST
Last Updated 24 ಏಪ್ರಿಲ್ 2024, 14:03 IST
ಅಕ್ಷರ ಗಾತ್ರ

ಮುಂಬೈ: ರಾಜ್ಯ ಸರ್ಕಾರವು ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷಿಸುತ್ತಿದೆ ಎಂಬ ಪ್ರತಿಪಕ್ಷ ‘ಮಹಾ ವಿಕಾಸ ಆಘಾಡಿ’ ಆರೋಪಿಸುತ್ತಿರುವ ನಡುವೆಯೇ, ತಮ್ಮ ಮಹಾ ಯುುತಿ ಸರ್ಕಾರವು ರೈತರಿಗೆ ಈವರೆಗೆ ₹15 ಸಾವಿರ ಕೋಟಿ ಮೊತ್ತವನ್ನು ಪರಿಹಾರವಾಗಿ ಬಿಡುಗಡೆ ಮಾಡಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ. 

ಹಿಂಗೋಳಿಯಲ್ಲಿ ಬುಧವಾರ ರ‍್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

‘ಕೆಲವು ಪ್ರದೇಶಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆ ರೀತಿ ಹಲವು ಸವಾಲುಗಳ ಹೊರತಾಗಿಯೂ, ನಾವು ನಮ್ಮ ರೈತರ ಪರ ಕೆಲಸ ಮಾಡುತ್ತಿದ್ದೇವೆ. ಚುನಾವಣೆ ನಡೆಯುತ್ತಿರುವ ನಡುವೆಯೇ, ಸಮಸ್ಯೆಗೆ ಸಿಲುಕಿದ ರೈತರಿಗೆ ಪರಿಹಾರ ಕಲ್ಪಿಸುವಂತೆ ನಿರ್ದೇಶನಗಳನ್ನು ನೀಡಲಾಗಿದೆ. ಈಗಾಗಲೇ ರೈತರಿಗೆ 15 ಸಾವಿರ ಕೋಟಿ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದ್ದು, ರೈತರ ಸಹಕಾರ ಕಾರ್ಯವನ್ನು ಮುಂದುವರಿಸಲಾಗುವುದು’ ಎಂದು ಹೇಳಿದರು. 

ಅಧಿಕಾರ ಕಳೆದುಕೊಂಡು ಒದ್ದಾಡುತ್ತಿರುವವರು ತಮ್ಮ ವಿರುದ್ಧ ವಿರುದ್ಧ ಆರೋಪ ಮತ್ತು ತಮ್ಮ ಕಾರ್ಯ ವೈಖರಿ ಟೀಕಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT