ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಶ್ಚಿಮ ಬಂಗಾಳ: ಲೋಕಸಭೆ ಚುನಾವಣೆಗೆ ಇಂದು ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Published 10 ಮಾರ್ಚ್ 2024, 6:20 IST
Last Updated 10 ಮಾರ್ಚ್ 2024, 6:20 IST
ಅಕ್ಷರ ಗಾತ್ರ

ಕೋಲ್ಕತ್ತ: ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಿಂದ ಕಣಕ್ಕಿಳಿಯಲಿರುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್‌ ಪಕ್ಷವು (ಟಿಎಂಸಿ) ಇಂದು ಪ್ರಕಟಿಸಲಿದೆ.

ನಗರದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ನಡೆಯುವ ಬೃಹತ್‌ ರ‍್ಯಾಲಿ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭ್ಯರ್ಥಿಗಳ ಹೆಸರು ಘೋಷಿಸಲಿದ್ದಾರೆ. ಇದರೊಂದಿಗೆ ಟಿಎಂಸಿಯ ಚುನಾವಣಾ ಪ್ರಚಾರವೂ ಆರಂಭವಾಗಲಿದೆ.

'ಪಶ್ಚಿಮ ಬಂಗಾಳದ 42 ಲೋಕಸಭೆ ಸ್ಥಾನಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪ್ರಕಟಿಸಲಿದ್ದಾರೆ' ಎಂದು ಟಿಎಂಸಿ ಹೇಳಿಕೆ ಬಿಡುಗಡೆ ಮಾಡಿದೆ.

ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಾರ್ವಜನಿಕ ಸಾಮಾವೇಶದ ಮೂಲಕ ಘೋಷಿಸುತ್ತಿರುವುದು ಇದೇ ಮೊದಲು. ವಿವಿಧ ಜಿಲ್ಲೆಗಳಿಂದ ಬಂದಿರುವ ಲಕ್ಷಾಂತರ ಬೆಂಬಲಿಗರು ಹಾಗೂ ಕಾರ್ಯಕರ್ತರು, ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT