ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Rajya Sabha | ಉಭಯ ಸದನಗಳ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

Published 20 ಜುಲೈ 2023, 7:37 IST
Last Updated 20 ಜುಲೈ 2023, 7:37 IST
ಅಕ್ಷರ ಗಾತ್ರ

ನವದೆಹಲಿ: ಗಣ್ಯರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಲೋಕಸಭಾ ಕಲಾಪವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಮತ್ತೊಂದೆಡೆ ಮಣಿಪುರ ಹಿಂಸಾಚಾರದ ಸ್ಥಿತಿಗತಿ ಕುರಿತು ಚರ್ಚೆಗೆ ವಿಪಕ್ಷಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನೂ 2 ಗಂಟೆಗೆ ಮುಂದೂಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಚರ್ಚೆ ನಡೆಸಲು ವಿರೋಧ ಪಕ್ಷದ ಸದಸ್ಯರು ಒತ್ತಾಯಿಸಿದ್ದಾರೆ. ಅಲ್ಲದೆ ಘಟನೆ ಸಂಬಂಧ ಪ್ರಧಾನಿ ಪ್ರತಿಕ್ರಿಯೆ ನೀಡಲೇಬೇಕು ಎಂದು ಪಟ್ಟು ಹಿಡಿದರು.

ಗದ್ದಲದ ಹಿನ್ನೆಲೆಯಲ್ಲಿ ಸಭಾಪತಿ ಜಗದೀಪ್‌ ಧನಕರ್‌ ಕಲಾಪವನ್ನು ಮುಂದೂಡಿದರು.

ಉಭಯ ಸದನಗಳ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT