ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅಪ್ರಕಟಿತ ಆತ್ಮಚರಿತ್ರೆ, ಅಮೆರಿಕದೊಂದಿಗೆ ವ್ಯಾಪಾರ ಸಂಬಂಧ ಸೇರಿ ಹಲವು ವಿಷಯಗಳನ್ನು ಉಲ್ಲೇಖಿಸಿ ಮಂಗಳವಾರವೂ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.
.ಮಹಾರಾಜರ ಕಾಲಕ್ಕೆ ದೇಶವನ್ನು ಕೊಂಡೊಯ್ಯುತ್ತಿರುವ ಮೋದಿ: ರಾಹುಲ್ ಗಾಂಧಿ .
ಗದ್ದಲದಿಂದಾಗಿ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಸ್ಪೀಕರ್ ಮುಂದೂಡಿದರು. ಮತ್ತೆ ಕಲಾಪ ಸೇರಿದರೂ ಗಲಾಟೆ ಮುಂದುವರಿಯಿತು. ಹೀಗಾಗಿ 2 ಗಂಟೆಗೆ ಸದನ ಮುಂದೂಡಲಾಗಿದೆ.

ನರವಣೆಯವರ ಪುಸ್ತಕದ ಭಾಗಗಳನ್ನು ಉಲ್ಲೇಖಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ನಿರಾಕರಿಸಿದ್ದರು. ಈ ವೇಳೆಯೂ ಪ್ರತಿಭಟನೆ ನಡೆದು, ಮಂಗಳವಾರಕ್ಕೆ ಕಲಾಪ ಮುಂದೂಡಿಕೆಯಾಗಿತ್ತು. ಆ ಬಗ್ಗೆ ಉಲ್ಲೇಖ ಮಾಡಬಾರದು ಎಂದು ಸ್ಪೀಕರ್ ಹೇಳಿದರೂ, ರಾಹುಲ್ ಗಾಂಧಿ ಪಟ್ಟು ಬಿಟ್ಟಿರಲಿಲ್ಲ.
.ಲಡಾಖ್ ಬಿಕ್ಕಟ್ಟಿನ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ರಾಹುಲ್: ಕಿಡಿಕಾರಿದ BJP.
ಮಂಗಳವಾರ ಸದನದ ಬಾವಿಗಿಳಿದ ಸದಸ್ಯರು ‘ಸರಂಡರ್ ಮೋದಿ’ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು. ಯೋಜಿತ ರೀತಿಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುವುದು ಸದಸ್ಯರಿಗೆ ಯೋಗ್ಯವಲ್ಲ ಎಂದು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು.
.ದೇಶದ ನೈಜ ಸಮಸ್ಯೆಗಳನ್ನು ಗಮನಿಸದ ಕುರುಡು ಬಜೆಟ್ : ರಾಹುಲ್ ಗಾಂಧಿ ಟೀಕೆ.
12 ಗಂಟೆಗೆ ಸದನ ಸೇರಿದಾಗ, ಮಣಿಕರ್ಣಿಕಾ ಘಾಟ್ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಸಮಾಜವಾದಿ ಪಕ್ಷದ ಸದಸ್ಯರು ಪ್ರಸ್ತಾಪಿಸಿದರು. ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.