ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಧೂಢಿ ಪ್ರಕರಣ: ಹಕ್ಕುಬಾಧ್ಯತಾ ಸಮಿತಿಗೆ ದೂರು ಒಪ್ಪಿಸಿದ ಸ್ಪೀಕರ್‌

Published 28 ಸೆಪ್ಟೆಂಬರ್ 2023, 16:04 IST
Last Updated 28 ಸೆಪ್ಟೆಂಬರ್ 2023, 16:04 IST
ಅಕ್ಷರ ಗಾತ್ರ

ನವದೆಹಲಿ : ಬಿಜೆಪಿ ಸದಸ್ಯ ರಮೇಶ್ ಬಿಧೂಢಿ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿವಿಧ ಸಂಸದರು ನೀಡಿರುವ ದೂರುಗಳನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಬಿಎಸ್‌ಪಿ ಸಂಸದ ಡ್ಯಾನಿಶ್‌ ಅಲಿ, ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, ಡಿಎಂಕೆ ಸಂಸದೆ ಕನಿಮೊಳಿ ಸೇರಿದಂತೆ ವಿಪಕ್ಷಗಳ ಹಲವು ಸದಸ್ಯರು ಬಿಧೂಢಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದರು. 

ನಿಶಿಕಾಂತ್‌ ದುಬೆ ಸೇರಿದಂತೆ ಹಲವು ಬಿಜೆಪಿ ಸದಸ್ಯರು, ಬಿಎಸ್‌ಪಿ ಸದಸ್ಯರು ಪ್ರಚೋದನೆ ನೀಡಿದರು ಎಂದು ಆರೋಪಿಸಿದ್ದಾರೆ. ಈ ಅಂಶವನ್ನು ಗಮನಿಸಬೇಕು ಎಂದು ಕೋರಿ ಸ್ಪೀಕರ್ ಅವರಿಗೆ ದೂರು ನೀಡಿದ್ದರು.

ಈ ಎಲ್ಲವನ್ನು ಬಿಜೆಪಿ ಸಂಸದ ಸುನಿಲ್‌ ಕುಮಾರ್‌ ಸಿಂಗ್ ನೇತೃತ್ವದ ಹಕ್ಕುಬಾಧ್ಯತಾ ಸಮಿತಿಗೆ ಸ್ಪೀಕರ್‌ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಕ್ಸ್‌ ಜಾಲತಾಣದಲ್ಲಿ ಗುರುವಾರ ಸಂದೇಶ ಪೋಸ್ಟ್‌ ಮಾಡಿರುವ ದುಬೆ, ದೂರುಗಳನ್ನು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸುವ ತೀರ್ಮಾನಕ್ಕಾಗಿ ಸ್ಪೀಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

‘ಬಿಜೆಪಿಗೆ ಬಹುಮತ ಇರುವುದರಿಂದ ಇದು ಸಾಧ್ಯವಾಗಿದೆ. ಈ  ಹಿಂದೆ ಹಲವು ಘಟನೆಗಳಿದ್ದರೂ ಯಾವುದೇ ಸಮಿತಿ ರಚನೆ ಆಗಿರಲಿಲ್ಲ. ಯಾರಿಗೂ ಶಿಕ್ಷೆಯೂ ಆಗಿರಲಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT