ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆಗಸ್ಟ್ 13ರಿಂದ ಮುಂದಿನ 6 ತಿಂಗಳವರೆಗೆ ವಿಸ್ತರಿಸಲು ಅನುಮತಿ ಕೋರಿ ಲೋಕಸಭೆಯಲ್ಲಿ ಬುಧವಾರ ನಿರ್ಣಯ ಮಂಡಿಸಲಾಯಿತು.

ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ರಾಷ್ಟ್ರಪತಿ ಆಡಳಿತ ವಿಸ್ತರಣೆಗೆ ಶಾಸನಬದ್ಧ ನಿರ್ಣಯ ಕೈಗೊಳ್ಳಲು ನಿರ್ಣಯ ಮಂಡಿಸಿದರು.

‘ರಾಷ್ಟ್ರಪತಿ ಆಡಳಿತವನ್ನು 6 ತಿಂಗಳು ವಿಸ್ತರಿಸಬೇಕಾದರೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಶಾಸನಬದ್ಧ ನಿರ್ಣಯವನ್ನು ಅಂಗೀಕರಿಸಬೇಕಾಗುತ್ತದೆ’ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜಿನಾಮೆ ಬೆನ್ನಲ್ಲೇ ಮಣಿಪುರದಲ್ಲಿ ಇದೇ ವರ್ಷ ಫೆಬ್ರುವರಿ 13ರಿಂದ 6 ತಿಂಗಳು ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಏಪ್ರಿಲ್ 2ರಂದು ಸದನ ಇದಕ್ಕೆ ಒಪ್ಪಿಗೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.