ನವದೆಹಲಿ: ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯ ಭಾಗವಾಗಿ ಗುರುವಾರ ವಿಚಾರಣೆಗೆ ಹಾಜರಾಗುವಂತೆ ವಕೀಲ ಜೈ ಅನಂತ್ ದೆಹಾದ್ರಾಯ್ ಅವರಿಗೆ ಸಿಬಿಐ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹದ್ರಾಯ್ ಅವರು ಮಹುವಾ ಅವರ ನಿಕಟವರ್ತಿಯಾಗಿದ್ದರು. ಬಳಿಕ ಅವರು ಮಹುವಾ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಹುವಾ ಅವರು ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಹಣ ಹಾಗೂ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಪಾಲದಲ್ಲಿ ದೂರು ದಾಖಲಿಸಿದ್ದರು. ಲೋಕಪಾಲರ ಶಿಫಾರಸಿನ ಅನ್ವಯ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ನೀತಿ ಸಮಿತಿಯ ವರದಿ ಆಧರಿಸಿ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. ಇದನ್ನು ಪ್ರಶ್ನಿಸಿ ಮಹುವಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
.ಲೋಕಸಭೆಯಿಂದ ಉಚ್ಚಾಟನೆ: ಸರ್ಕಾರಿ ಬಂಗಲೆ ಖಾಲಿ ಮಾಡಿದ TMC ನಾಯಕಿ ಮಹುವಾ ಮೊಯಿತ್ರಾ.ಲೋಕಸಭೆಯಿಂದ ಉಚ್ಚಾಟನೆ: ಸುಪ್ರೀಂ ಕೋರ್ಟ್ ಮೊರೆ ಹೋದ ಮಹುವಾ ಮೊಯಿತ್ರಾ.ಲೋಕಸಭೆಯಿಂದ ಉಚ್ಚಾಟನೆ | ಹಲವು ಏಳು–ಬೀಳು ಕಂಡ ಮಹುವಾ ಮೊಯಿತ್ರಾ.ನನಗೆ 49 ವರ್ಷ, ಇನ್ನೂ 30 ವರ್ಷ ಹೋರಾಡುವೆ: ಮಹುವಾ ಮೊಯಿತ್ರಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.