ನವದೆಹಲಿ: 'ಲೋಕಸಭೆಯ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡಲಾಗುತ್ತಿಲ್ಲ' ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದ ರಚನೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ 'ನವ ಭಾರತ'ದಲ್ಲಿ ಅನುಮತಿ ನೀಡಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಸಂಸತ್ತಿನಲ್ಲಿ ಮಹಾಕುಂಭ ಮೇಳದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ವಿಪಕ್ಷಗಳ ಗದ್ದಲದ ನಡುವೆ ಸದನವನ್ನು ಮುಂದೂಡಲಾಯಿತು.

ಜನವರಿ 29ರಂದು ಪ್ರಯಾಗ್ರಾಜ್ನ ಸಂಗಮದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಸಬೇಕಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

'ಪ್ರಧಾನಿ ಹೇಳಿಕೆಯನ್ನು ನಾನು ಬೆಂಬಲಿಸಲು ಬಯಸಿದ್ದೆ. ಕುಂಭ ನಮ್ಮ ಸಂಪ್ರದಾಯ, ಇತಿಹಾಸ ಮತ್ತು ಸಂಸ್ಕೃತಿಯಾಗಿದೆ. ಆದರೆ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸಿಲ್ಲ' ಎಂದು ಸಂಸತ್ತಿನ ಆವರಣದಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

'ಮತ್ತೊಂದು ವಿಷಯ ಏನೆಂದರೆ ಕುಂಭಮೇಳಕ್ಕೆ ಹೋದ ಯುವಜನತೆಗೆ ಉದ್ಯೋಗದ ಅಗತ್ಯವಿದೆ. ಪ್ರಧಾನಿಯವರು ಉದ್ಯೋಗದ ಬಗ್ಗೆ ಮಾತನಾಡಬೇಕು' ಎಂದು ಅವರು ಆಗ್ರಹಿಸಿದ್ದಾರೆ.

ಪ್ರಧಾನಿ ತಮ್ಮ ಭಾಷಣದಲ್ಲಿ ಕುಂಭಮೇಳ ಯಶಸ್ವಿ ಆಯೋಜನೆಯನ್ನು ಮೈಲಿಗಲ್ಲು ಎಂದು ಬಣ್ಣಿಸಿದ್ದರು. ಭಾರತದ ಸಾಮರ್ಥ್ಯವನ್ನು ಪ್ರಶ್ನಿಸುವವರಿಗೆ ಸೂಕ್ತ ಉತ್ತರ ದೊರಕಿದೆ. ಇಡೀ ಜಗತ್ತೇ ಭಾರತದ ವೈಭವವನ್ನು ಕಂಡಿತು ಎಂದು ಹೇಳಿದ್ದರು.

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳವು ಜನವರಿ 13ರಿಂದ ಆರಂಭವಾಗಿ ಫೆಬ್ರುವರಿ 26ರಂದು ಮುಕ್ತಾಯಗೊಂಡಿತ್ತು. ಆದರೆ ಜನವರಿ 29, ಮೌನಿ ಅಮಾವಾಸ್ಯೆಯಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ 30 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು.
.ಪ್ರಧಾನಿ ನರೇಂದ್ರ ಮೋದಿಯವರ ಲೇಖನ | ಏಕತೆಯ ಮಹಾಕುಂಭ; ಹೊಸ ಯುಗದ ಉದಯ .ಬಿಜೆಪಿ ಪರ ಕೆಲಸ ಮಾಡುವ ನಾಯಕರನ್ನು ಕಾಂಗ್ರೆಸ್ನಿಂದ ಹೊರಗಿಡಬೇಕು: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.