ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮತ್ತೆ ಲಘು ಭೂಕಂಪ

Last Updated 15 ಮೇ 2020, 7:14 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯ ಪಿತಂಪುರದಲ್ಲಿ ಶುಕ್ರವಾರ ಲಘು ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ 2.2ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಬೆಳಿಗ್ಗೆ 11.28ರ ವೇಳೆಗೆ ಭೂಕಂಪನ ಅನುಭವಕ್ಕೆ ಬಂದಿದೆ. 8 ಕಿ.ಮೀ ಆಳದಲ್ಲಿ ಕಂಪನ ಕೇಂದ್ರವಿತ್ತು ಎಂದು ಎನ್‌ಸಿಎಸ್ ಹೇಳಿದೆ. ದೆಹಲಿಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಸಂಭವಿಸುತ್ತಿರುವ ನಾಲ್ಕನೇ ಭೂಕಂಪ ಇದಾಗಿದೆ.

ಮೇ 10ರಂದೂ ದೆಹಲಿಯಲ್ಲಿ ಲಘು ಭೂಕಂಪ ಸಂಭವಿಸಿತ್ತು. ಇಂದು ಭೂಕಂಪ ಸಂಭವಿಸಿದ ಪ್ರದೇಶದಲ್ಲೇ ಏಪ್ರಿಲ್ 12 ಮತ್ತು 13ರಂದು 3.5 ಹಾಗೂ 2.7 ತೀವ್ರತೆಯ ಭೂಕಂಪ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT