ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 5,784 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 252 ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,47,03,644ಕ್ಕೆ ತಲುಪಿದ್ದು, 88,993 ಸಕ್ರಿಯ ಪ್ರಕರಣಗಳಿವೆ. ಈವರೆಗೂ 4,75,888 ಮಂದಿ ಸಾವಿಗೀಡಾಗಿದ್ದಾರೆ.
ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 7,995 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟಾರೆ 3,41,38,763 ಮಂದಿ ಈವರೆಗೆ ಗುಣಮುಖರಾಗಿದ್ದಾರೆ.
COVID19 | India reports 5,784 new cases, 7,995 recoveries, & 252 deaths in the last 24 hours
Active cases: 88,993 Total recoveries: 3,41,38,763 Death toll: 4,75,888