ಚೆನ್ನೈ: ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಬುಧವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ದಕ್ಷಿಣ ರಾಜ್ಯಗಳ ಸಂಸದರು ಮತ್ತು ಪಕ್ಷದ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿ ರಚಿಸುವ ಬಗ್ಗೆ ಪ್ರಸ್ತಾಪಿಸಿದರು.

ಈ ವೇಳೆ ಮಾತನಾಡಿದ ಸ್ಟಾಲಿನ್, ಕ್ಷೇತ್ರ ಪುನರ್ ವಿಂಗಡಣೆ ಸಂದರ್ಭದಲ್ಲಿ 1971ರ ಜನಗಣತಿಯನ್ನೇ ಆಧಾರವನ್ನಾಗಿಟ್ಟುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ವ ಪಕ್ಷ ಸಭೆಯಲ್ಲಿ ಲೋಕಸಭಾ ಪುನರ್ ವಿಂಗಡಣೆ ಕುರಿತು ನಿರ್ಣಯ ಮಂಡಿಸುವ ಸಾಧ್ಯತೆಯಿದೆ.

ಸಭೆಯಲ್ಲಿ ವಿರೋಧ ಪಕ್ಷ ಎಐಎಡಿಎಂಕೆ, ಕಾಂಗ್ರೆಸ್, ವಿಜಯ್ ದಳಪತಿ ಅವರ ಟಿವಿಕೆ ಮತ್ತು ಇತರ ಪಕ್ಷಗಳು ಭಾಗವಹಿಸಿದ್ದವು. ಬಿಜೆಪಿ, ತಮಿಳು ರಾಷ್ಟ್ರೀಯವಾದಿ ನಾಮ್ ತಮಿಳರ್ ಕಚ್ಚಿ (ಎನ್ಟಿಕೆ) ಮತ್ತು ಮಾಜಿ ಕೇಂದ್ರ ಸಚಿವ ಜಿ.ಕೆ. ವಾಸನ್ ಅವರ ತಮಿಳು ಮಾನಿಲ ಕಾಂಗ್ರೆಸ್ (ಮೂಪನಾರ್) ಸಭೆಯನ್ನು ಬಹಿಷ್ಕರಿಸಿದ್ದವು.

ಕ್ಷೇತ್ರ ಪುನರ್ ವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬರುತ್ತಿರುವ ಆಡಳಿತಾರೂಢ ಡಿಎಂಕೆ, ತಮಿಳುನಾಡಿನಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಇಳಿಮುಖವಾಗುವ ಸಾಧ್ಯತೆಯಿದೆ ಎಂಬ ಆತಂಕವನ್ನು ಹೊರಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.