ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಮತಗಟ್ಟೆಯೊಂದರಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸರ್ಕಾರಿ ಶಾಲಾ ಶಿಕ್ಷಕಿ ಕೌಶಿಕ ಬಬಾರಿಯಾ ಅವರು ಜಾಫ್ರಾಬಾದ್‌ನ ಶಾಲೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಜಯ್ ದಹಿಯಾ ಹೇಳಿದರು.

‘ಜಾಫ್ರಾಬಾದ್ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೂ ಕಳುಹಿಸಲಾಗಿತ್ತು’ ಎಂದು ದಹಿಯಾ ಹೇಳಿದರು.

‘ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿರಬಹುದೆಂದು ವೈದ್ಯರು ತಿಳಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.