ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಹಂತದ ಮತದಾನ: ಅಧಿಸೂಚನೆ ಪ್ರಕಟ

Published 28 ಮಾರ್ಚ್ 2024, 14:12 IST
Last Updated 28 ಮಾರ್ಚ್ 2024, 14:12 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕಾಗಿ ಚುನಾವಣಾ ಆಯೋಗವು ಗುರುವಾರ ಅಧಿಸೂಚನೆ ಹೊರಡಿಸಿದೆ.

ಏಪ್ರಿಲ್‌ 26ರಂದು 12 ರಾಜ್ಯಗಳ ಒಟ್ಟು 88 ಕ್ಷೇತ್ರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳು ಸೇರಿದಂತೆ ಅಸ್ಸಾಂ, ಬಿಹಾರ, ಛತ್ತೀಸಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತ್ರಿಪುರಾ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ಹಮ್ಮಿಕೊಳ್ಳಲಾಗಿದೆ.

ಔಟರ್‌ ಮಣಿಪುರ ಲೋಕಸಭಾ ಕ್ಷೇತ್ರಕ್ಕೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್‌ 19 ರಂದು 15 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಾಗೂ 26ರಂದು 13 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ.

ಮಣಿಪುರದಲ್ಲಿ ಈಚೆಗೆ ಹಿಂಸಾಚಾರ ನಡೆದ ಕಾರಣ ಈ ಲೋಕಸಭಾ ಕ್ಷೇತ್ರಕ್ಕೆ ಎರಡು ಹಂತಗಳಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗವು ನಿರ್ಧರಿಸಿತ್ತು. ಅಧಿಸೂಚನೆ ಹೊರಡಿಸಿದ ಬಳಿಕ ಆಯೋಗವು ಈ ಕ್ಷೇತ್ರಗಳ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲು ಪ್ರಕ್ರಿಯೆ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT