ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

400 ಸೀಟು ಗೆಲ್ಲುವುದಾದರೆ ರಾಜಕೀಯ ಪಕ್ಷಗಳನ್ನು ಏಕೆ ಸಂಪರ್ಕಿಸುತ್ತೀರಿ? -ರೇವಂತ್

Published 10 ಮಾರ್ಚ್ 2024, 2:08 IST
Last Updated 10 ಮಾರ್ಚ್ 2024, 2:08 IST
ಅಕ್ಷರ ಗಾತ್ರ

ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸೀಟು ಗೆಲ್ಲುವುದಾಗಿ ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಾರೆ. ಇದಕ್ಕೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ತಿರುಗೇಟು ನೀಡಿದ್ದಾರೆ.

400 ಸೀಟು ಗೆಲ್ಲುವ ನಂಬಿಕೆ ನಿಮಗಿದ್ದರೆ (ಬಿಜೆಪಿ) ಬೇರೆ ಬೇರೆ ರಾಜ್ಯಗಳಲ್ಲಿ ಮೈತ್ರಿಗಾಗಿ ರಾಜಕೀಯ ಪಕ್ಷಗಳನ್ನು ಏಕೆ ಸಂಪರ್ಕಿಸುತ್ತೀರಿ ಎಂದು ರೇವಂತ್ ರೆಡ್ಡಿ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಅವರು ಎನ್‌ಸಿಪಿ ಮತ್ತು ಶಿವಸೇನಾ ಪಕ್ಷಗಳನ್ನು ಇಬ್ಘಾಗಗೊಳಿಸಿದರು. ಕರ್ನಾಟಕದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪಕ್ಷದೊಂದಿಗೆ ಕೈಜೋಡಿಸಿದರು. ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ದು ಜತೆ ಮತ್ತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ತೆಲಂಗಾಣದಲ್ಲಿ ಜನಪರ ಸರ್ಕಾರ ಇದ್ದು, ಜನರ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಆಂಧ್ರ ಪ್ರದೇಶದಲ್ಲಿ ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ, ತೆಲುಗುದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷಗಳು ಮೈತ್ರಿ ಕುರಿತು ಒಪ್ಪಂದ ಮಾಡಿಕೊಂಡಿವೆ. 2018ರಲ್ಲಿ ಎನ್‌ಡಿಎ ತೊರೆದಿದ್ದ ಟಿಡಿಪಿ, ಆರು ವರ್ಷಗಳ ಬಳಿಕ ಮತ್ತೆ ಎನ್‌ಡಿಎ ತೆಕ್ಕೆಗೆ ಮರಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT