ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿಯವರ 400 ದಾಟುವ ಸಿನಿಮಾ ಓಡುತ್ತಿಲ್ಲ: ತೇಜಸ್ವಿ ಯಾದವ್‌

Published 27 ಏಪ್ರಿಲ್ 2024, 10:35 IST
Last Updated 27 ಏಪ್ರಿಲ್ 2024, 10:35 IST
ಅಕ್ಷರ ಗಾತ್ರ

ಪಾಟ್ನಾ: 400 ದಾಟುವ (400 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ) ಪ್ರಧಾನಿ ನರೇಂದ್ರ ಮೋದಿ ಅವರ ಸಿನಿಮಾ ಮೊದಲ ಹಂತದ ಮತದಾನದ ವೇಳೆಯೇ ಫ್ಲಾಪ್ ಆಗಿದೆ. ಎರಡನೇ ಹಂತದ ಮತದಾನಲ್ಲೂ ಸಿನಿಮಾ ವಿಫಲವಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದರು.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಪಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡನೇ ಹಂತದ ಮತದಾನದ ಬಳಿಕ ಬಿಜೆ‍ಪಿಯವರು ಖಿನ್ನತೆಗೆ ಒಳಗಾಗಿದ್ದಾರೆ. ಇಲ್ಲಿನ ಸಮಸ್ಯೆಗಳ ಬಗ್ಗೆ, ಅಭಿವೃದ್ಧಿಯ ಬಗ್ಗೆ ಪ್ರಧಾನಿ ಮಾತನಾಡುತ್ತಿಲ್ಲ ಎಂದು ಇಲ್ಲಿನ ಜನ ಹೇಳುತ್ತಿದ್ದಾರೆ. ಉದ್ಯೋಗ ಸಿಗುವುದೂ ಕಷ್ಟವಾಗಿದೆ. ದೇಶದ ಜನರು ಸಹಿಸಿಕೊಳ್ಳಲಾರದಷ್ಟು ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ತೇಜಸ್ವಿ ಹೇಳಿದರು.

ಪ್ರಧಾನಿ ಶಿಕ್ಷಣದ ಬಗ್ಗೆ ಮಾತನಾಡುತ್ತಿಲ್ಲ. ಆರೋಗ್ಯ, ಆದಾಯ, ರೈತರು, ನಿರುದ್ಯೋಗದ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಅವರು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT