ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಮತದಾನದ ಅವಧಿ ಒಂದು ತಾಸು ಹೆಚ್ಚಳ

Published 2 ಮೇ 2024, 14:07 IST
Last Updated 2 ಮೇ 2024, 14:07 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದಲ್ಲಿ ಬಿಸಿಗಾಳಿ ಹೆಚ್ಚಾಗಿದ್ದರಿಂದ ಚುನಾವಣಾ ಆಯೋಗವು ಮತದಾನದ ಅವಧಿಯನ್ನು ಒಂದು ತಾಸು ಹೆಚ್ಚಳ ಮಾಡಿ, ಬುಧವಾರ ಅಧಿಸೂಚನೆ ಹೊರಡಿಸಿದೆ‌.

ಈಗಿರುವ ಮತದಾನದ ಅವಧಿ ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯನ್ನು ವಿಸ್ತರಿಸಲಾಗಿದೆ.  ಪರಿಷ್ಕೃತ ಅವಧಿ ಅನ್ವಯ ಬೆಳಿಗ್ಗೆ 7ರಿಂದ ಸಂಜೆ 6ರವರೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ತೆಲಂಗಾಣದ ಎಲ್ಲ 17 ಲೋಕಸಭಾ ಕ್ಷೇತ್ರಗಳಿಗೂ ಮೇ 13ರಂದು ಚುನಾವಣೆ ನಡೆಯಲಿದೆ.

‘ತೆಲಂಗಾಣದ ಮುಖ್ಯ ಚುನಾವಣಾಧಿಕಾರಿಯವರ ವಿನಂತಿಯ ಮೇರೆಗೆ ಆಯೋಗ ಈ ನಿರ್ಧಾರ ಕೈಗೊಂಡಿದೆ’ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT