ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ ಫಲಿತಾಂಶ: ಮುನ್ನಡೆ ಸಾಧಿಸಿದ ಮಹಿಳಾ ಅಭ್ಯರ್ಥಿಗಳಿವರು..

Published 4 ಜೂನ್ 2024, 11:41 IST
Last Updated 4 ಜೂನ್ 2024, 11:41 IST
ಅಕ್ಷರ ಗಾತ್ರ

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಎನ್‌ಡಿಎ ಬಹುಮತದತ್ತ ಸಾಗುತ್ತಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಕಂಗನಾ ರನೌತ್, ಹೇಮಾ ಮಾಲಿನಿ , ಡಿಂಪಲ್ ಯಾದವ್ ಮತ್ತು ಮೀಸಾ ಭಾರತಿ ಸೇರಿದಂತೆ ಕೆಲವು ಪ್ರಮುಖ ಮಹಿಳಾ ಅಭ್ಯರ್ಥಿಗಳು ಗಮನಾರ್ಹ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಕಂಗನಾ ರನೌತ್:

ಲೋಕಸಭೆ ಚುನಾವಣೆಯಲ್ಲಿ ಒಟ್ಟು 797 ಮಹಿಳೆಯರು ಸ್ಪರ್ಧಿಸಿದ್ದರು. ಮಧ್ಯಾಹ್ನ 3 ಗಂಟೆಯ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಬಿಜೆಪಿಯಿಂದ ಮೊದಲ ಬಾರಿಗೆ ಸ್ಪರ್ಧಿಸಿರುವ ಕಂಗನಾ ಅವರು, ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ವಿರುದ್ಧ 70 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಹೇಮಾ ಮಾಲಿನಿ:

ಮಥುರಾದಿಂದ ಹಾಲಿ ಸಂಸದೆ ಹೇಮಾ ಮಾಲಿನಿ ಅವರು ಕಾಂಗ್ರೆಸ್ ಅಭ್ಯರ್ಥಿ ಮುಖೇಶ್ ಧಂಗರ್ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಬಾನ್ಸುರಿ ಸ್ವರಾಜ್:

ನವದೆಹಲಿ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದಿರುವ ಬಾನ್ಸುರಿ ಸ್ವರಾಜ್ 50 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಡಿಂಪಲ್ ಯಾದವ್:

ಮೈನಪುರಿಯ ಹಾಲಿ ಸಂಸದೆ ಡಿಂಪಲ್ ಯಾದವ್ (ಸಮಾಜದವಾದಿ ಪಕ್ಷ) ಅವರು ಬಿಜೆಪಿಯ ಜಯವೀರ್ ಸಿಂಗ್ ವಿರುದ್ಧ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೀಸಾ ಭಾರತಿ:

ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಅವರ ಪುತ್ರಿ ಮೀಸಾ ಭಾರತಿ ಅವರು ಕೇಂದ್ರ ಸಚಿವ ಮತ್ತು ಬಿಹಾರದ ಪಾಟಲಿಪುತ್ರದಿಂದ ಹಾಲಿ ಸಂಸದರ ವಿರುದ್ಧ ಸುಮಾರು 50 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಮಹುವಾ ಮೊಯಿತ್ರಾ:

ಪಶ್ಚಿಮ ಬಂಗಾಳದ ಕೃಷ್ಣನಗರದ ಹಾಲಿ ಸಂಸದೆ ಮಹುವಾ ಮೊಯಿತ್ರಾ 50 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಸುಪ್ರಿಯಾ ಸುಳೆ:

ಬಾರಾಮತಿಯ ಹಾಲಿ ಸಂಸದೆ ಸುಪ್ರಿಯಾ ಸುಳೆ 20 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ .

ಸಿರ್ಸಾದ ಕಾಂಗ್ರೆಸ್ ಅಭ್ಯರ್ಥಿ ಸೆಲ್ಜಾ 2.5 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಸೋಲಿನ ಸುಳಿಯಲ್ಲಿ ಸ್ಮೃತಿ ಇರಾನಿ, ಮೇನಕಾ:

2019 ರ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ರಾಹುಲ್ ಗಾಂಧಿಯನ್ನು ಸೋಲಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಇದುವರೆಗಿನ ಟ್ರೆಂಡ್‌ಗಳಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಮೇನಕಾ ಗಾಂಧಿ ಕೂಡ ಸುಲ್ತಾನ್‌ಪುರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT