ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಣಯ ಸಾಧ್ಯತೆ: ಪಟೋಲೆ

Published 6 ಮಾರ್ಚ್ 2024, 13:22 IST
Last Updated 6 ಮಾರ್ಚ್ 2024, 13:22 IST
ಅಕ್ಷರ ಗಾತ್ರ

ನಂದುರ್‌ಬಾರ್‌: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಮುಂಬೈನಲ್ಲಿ ನಡೆದ ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಸ್‌ ಆಘಾಡಿ (ಎಂವಿಎ) ಸಭೆಯಲ್ಲಿ ಅಂತಿಮ ನಿರ್ಣಯಕ್ಕೆ ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ತಿಳಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್‌, ಶಿವಸೇನಾ (ಉದ್ಧವ್‌ ಬಣ), ಎನ್‌ಸಿಪಿ (ಶರದ್‌ ಪವಾರ್‌ ಬಣ) ಹಾಗೂ ವಂಚಿತ್‌ ಬಹುಜನ ಆಘಾಡಿ ನಾಯಕರಾದ ಬಾಳಾಸಾಹೇಬ್‌ ತೋರಟ್‌, ಉದ್ಧವ್‌ ಠಾಕ್ರೆ, ಶರದ್‌ ಪವಾರ್‌ ಮತ್ತು ಪ್ರಕಾಶ್ ಅಂಬೇಡ್ಕರ್‌ ಭಾಗಿಯಾಗಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್‌ನಲ್ಲಿ ವಂಶಪಾರಂಪರ್ಯ ರಾಜಕಾರಣ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿದ ಪಟೋಲೆ, ‘ಅಮಿತ್‌ ಶಾ ಪುತ್ರ ಕ್ರಿಕೆಟ್‌ ಮಂಡಳಿಯ ಪದಾಧಿಕಾರಿಯಾಗಿರುವಾಗ ಗಾಂಧಿ ಕುಟುಂಬದ ಬಗ್ಗೆ ಅವರು ಹೇಗೆ ಬೊಟ್ಟು ಮಾಡುತ್ತಾರೆ’ ಎಂದು ಪ್ರಶ್ನಿಸಿದರು.

'ರಾಹುಲ್‌ ಗಾಂಧಿ ಅವರ ಕುಟುಂಬಸ್ಥರು ಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ಸದ್ಯ ರಾಹುಲ್ ಸಹ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸುತ್ತಾರೆ. ಆದರೆ ಅವರು (ಬಿಜೆಪಿ) ಏನು ಮಾಡಿದ್ದಾರೆ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT