ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Lok Sabha Elections | 5ನೇ ಹಂತದಲ್ಲಿ ಶೇ 62.2ರಷ್ಟು ಮತದಾನ

Published 23 ಮೇ 2024, 14:34 IST
Last Updated 23 ಮೇ 2024, 14:34 IST
ಅಕ್ಷರ ಗಾತ್ರ

ನವದೆಹಲಿ: ಮೇ 20ರಂದು ನಡೆದ ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಶೇ 62.2ರಷ್ಟು ಮತದಾನವಾಗಿದ್ದು, ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಶೇ 61.48ರಷ್ಟು ಪುರುಷರು ಹಾಗೂ ಶೇ 63ರಷ್ಟು ಮಹಿಳೆಯರು ಮತದಾನ ಮಾಡಿದ್ದಾರೆ. ಎರಡು ಕೇಂದ್ರಾಡಳಿತ ಪ್ರದೇಶಗಳು ಹಾಗೂ ಆರು ರಾಜ್ಯಗಳ 49 ಕ್ಷೇತ್ರಗಳಿಗೆ ಐದನೇ ಹಂತದಲ್ಲಿ ಮತದಾನ ನಡೆದಿತ್ತು ಎಂದು ಹೇಳಿಕೆಯಲ್ಲಿ ವಿವರಿಸಿದೆ.

ಬಿಹಾರ, ಜಾರ್ಖಂಡ್‌, ಲಡಾಖ್‌, ಒಡಿಶಾ ಮತ್ತು ಉತ್ತರ ಪ್ರದೇಶದಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಆಯೋಗದ ಅಧಿಕಾರಿಗಳು ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಶೇ 64.16 ರಷ್ಟು ಮತದಾನವಾಗಿತ್ತು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT