ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಪ್ರಮುಖರಿಂದ ನಾಮಪತ್ರ ಸಲ್ಲಿಕೆ

Published 4 ಏಪ್ರಿಲ್ 2024, 14:07 IST
Last Updated 4 ಏಪ್ರಿಲ್ 2024, 14:07 IST
ಅಕ್ಷರ ಗಾತ್ರ

ತಿರುವನಂತಪುರ: ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್‌ ಚಂದ್ರಶೇಖರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪ್ರಮುಖರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.

ರಾಜೀವ್‌ ಅವರು ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಮತ್ತು ಪಕ್ಷದ ನಾಯಕರು ಉಪಸ್ಥಿತರಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಶಶಿ ತರೂರ್‌, ಎಲ್‌ಡಿಎಫ್ ಅಭ್ಯರ್ಥಿಯಾಗಿ ಸಿಪಿಐ ಮುಖಂಡ ಪನ್ಯನ್‌ ರವೀಂದ್ರನ್‌ ಸ್ಪರ್ಧಿಸುತ್ತಿದ್ದಾರೆ.

ಕೆ.ಸಿ.ವೇಣುಗೋಲ್‌ ಅವರು ಆಳಪ್ಪುಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ವಯನಾಡ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್‌, ತ್ರಿಶ್ಯೂರ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರೂ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಸುರೇಂದ್ರನ್‌ ಅವರು ರೋಡ್‌ ಶೋ ನಡೆಸಿದರು. ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಾಲ್ಗೊಂಡಿದ್ದರು. ಪಾಲಕ್ಕಾಡ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ. ಕೃಷ್ಣಕುಮಾರ್‌ ಅವರೂ ನಾಮಪತ್ರ ಸಲ್ಲಿಸಿದರು.

ಹೇಮಾ ಮಾಲಿನಿ ನಾಮಪತ್ರ: 

ಬಿಜೆಪಿ ಸಂಸದೆ ಹಾಗೂ ಉತ್ತರಪ್ರದೇಶದ ಮಥುರಾ ಕ್ಷೇತ್ರದ ಅಭ್ಯರ್ಥಿ ಹೇಮಾ ಮಾಲಿನಿ ಅವರು ನಾಮಪತ್ರ ಸಲ್ಲಿಸಿದರು. ರಾಜ್ಯ ಸಚಿವ ಸ್ವತಂತ್ರ ದೇವ್‌ ಸಿಂಗ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT