ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಕೊನೆಯ ಹಂತದ ಮತದಾನದ ಬಳಿಕ ಧನ್ಯವಾದ ತಿಳಿಸಿದ ಚುನಾವಣಾ ಆಯೋಗ

Published 1 ಜೂನ್ 2024, 13:35 IST
Last Updated 1 ಜೂನ್ 2024, 13:35 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ಒಟ್ಟು ಏಳು ಹಂತಗಳ ಮತದಾನ ಪಕ್ರಿಯೆಯು ಇಂದು (ಶನಿವಾರ) ಮುಕ್ತಾಯಗೊಂಡಿದೆ. ಚುನಾವಣಾ ಆಯೋಗವು ಮತದಾನ ನಡೆಯಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದೆ.

ಈ ಸಂಬಂಧ ಚುನಾವಣಾ ಆಯೋಗವು ‘ಎಕ್ಸ್‌‘ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಮತದಾನಕ್ಕೆ ಸಹಕರಿಸಿದ ಮತದಾರರು, ಪೊಲೀಸರು, ಚುನಾವಣಾ ಸಿಬ್ಬಂದಿ, ರಾಜಕೀಯ ಪಕ್ಷದವರು ಮಾಧ್ಯಮದವರು ಸೇರಿದಂತೆ ಮತದಾನ ಪ್ರಕ್ರಿಯೆ ನಡೆಯಲು ಅನುವು ಮಾಡಿಕೊಟ್ಟ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿದೆ.

ದೇಶದಲ್ಲಿ ಒಟ್ಟು 543 ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆದಿದ್ದು, ಜೂನ್‌ 4ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT