ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪೇಂದ್ರ ದ್ವಿವೇದಿ ಸೇನೆಯ ನೂತನ ಮುಖ್ಯಸ್ಥ

Published 11 ಜೂನ್ 2024, 20:01 IST
Last Updated 11 ಜೂನ್ 2024, 20:01 IST
ಅಕ್ಷರ ಗಾತ್ರ

ನವದೆಹಲಿ: ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್‌ ಉಪೇಂದ್ರ ದ್ವಿವೇದಿ ನೇಮಕಗೊಂಡಿದ್ದಾರೆ. ಹಾಲಿ ಮುಖ್ಯಸ್ಥ ಜನರಲ್‌ ಪಾಂಡೆ ಅವರು ಜೂನ್‌ 30ರಂದು ನಿವೃತ್ತರಾಗಲಿದ್ದು, ಅವರ ಸ್ಥಾನದಲ್ಲಿ ದ್ವಿವೇದಿ ಅಧಿಕಾರ ಸ್ವೀಕರಿಸುವರು.  

ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು ಪ್ರಸ್ತುತ ಸೇನೆಯ ಉಪಮುಖ್ಯಸ್ಥರಾಗಿದ್ದಾರೆ. ಸೇವಾ ಹಿರಿತನವನ್ನು ಆಧರಿಸಿ ದ್ವಿವೇದಿ ಅವರನ್ನು ನೇಮಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

ಪಾಂಡೆ ಅವರು ಮೇ 31ರಂದೇ ನಿವೃತ್ತರಾಗಬೇಕಿತ್ತು. ಸರ್ಕಾರ ಅವರ ಸೇವೆಯನ್ನು ಒಂದು ತಿಂಗಳ ಮಟ್ಟಿಗೆ ವಿಸ್ತರಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT