‘ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, 24 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತುಗಳು ಇನ್ನಷ್ಟೇ ಪತ್ತೆಯಾಗಬೇಕಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡವನ್ನು ಉಗ್ರಾಣವಾಗಿ ಬಳಸಲಾಗುತ್ತಿತ್ತು. ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲವು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದವು. ಸುಮಾರು ನಾಲ್ಕು ವರ್ಷಗಳ ಹಿಂದೆ ಕಟ್ಟಡವನ್ನು ನಿರ್ಮಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನೋಡಿಕೊಳ್ಳಲು ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ’ ಎಂದು ಕಮಿಷನರ್ ಜಿ. ಎಸ್ ನವೀನ್ ಕುಮಾರ್ ತಿಳಿಸಿದ್ದಾರೆ.