ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ಸರ್ಕಾರದ ಸುಭದ್ರಾ ಯೋಜನೆ, ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಗಳವಾರ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ 10.50ರ ಸುಮಾರಿಗೆ ಅವರು ಇಲ್ಲಿನ ಬಿಜು ಪಟ್ನಾಯಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದು ನಂತರ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಭಗವಾನ್ ಬಲಭದ್ರ ಮತ್ತು ಭಗವಾನ್ ಜಗನ್ನಾಥನ ಸಹೋದರಿ ಸುಭದ್ರಾ ದೇವಿಯ ಹೆಸರಿನ ಸುಭದ್ರಾ ಯೋಜನೆ ಅಡಿಯಲ್ಲಿ 21ರಿಂದ 60 ವರ್ಷದೊಳಗಿನ ಮಹಿಳೆಯರಿಗೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ ₹ 50,000 ನೀಡಲಾಗುವುದು. ವಾರ್ಷಿಕ 10 ಸಾವಿರದಂತೆ ಐದು ವರ್ಷಗಳಲ್ಲಿ 50 ಸಾವಿರ ನೀಡಲಾಗುವುದು.
ಈ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಷಕ್ಕೆ ಎರಡು ಕಂತುಗಳಲ್ಲಿ ಜಮಾ ಮಾಡಲಾಗುವುದು. ಈ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ರೈಲು ಹಾಗೂ ಹೆದ್ದಾರಿ ಯೋಜನೆಗಳಿಗೂ ಚಾಲನೆ ಕೊಡಲಿದ್ದಾರೆ.