ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ASEAN India Summit: ಇಂದು ಇಂಡೋನೇಷ್ಯಾಗೆ ಪ್ರಯಾಣಿಸಲಿರುವ ಪ್ರಧಾನಿ ಮೋದಿ

Published 6 ಸೆಪ್ಟೆಂಬರ್ 2023, 4:27 IST
Last Updated 6 ಸೆಪ್ಟೆಂಬರ್ 2023, 4:27 IST
ಅಕ್ಷರ ಗಾತ್ರ

ನವದೆಹಲಿ: 20ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ.

ನಾಳೆ ಸಂಜೆ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಮರಳಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. 

ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೊಡೊ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಕಾರ್ತಗೆ ಭೇಟಿ ನೀಡುತ್ತಿದ್ದಾರೆ. ಆಸಿಯಾನ್-ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆ ನಾಳೆ (ಗುರುವಾರ) ನಡೆಯಲಿದೆ.

ಪ್ರಧಾನಿ ಮೋದಿ ಅವರು ಅದೇ ದಿನ ಭಾರತಕ್ಕೆ ಮರಳಲು ಅನುಕೂಲವಾಗುವಂತೆ ಎರಡೂ ಶೃಂಗಸಭೆಗಳ ವೇಳಾಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT