ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Madhya Pradesh Election Results: ಗೆಲುವಿನ ವಿಶ್ವಾಸದಲ್ಲಿ BJP, ಕಾಂಗ್ರೆಸ್

Published 2 ಡಿಸೆಂಬರ್ 2023, 12:45 IST
Last Updated 2 ಡಿಸೆಂಬರ್ 2023, 12:45 IST
ಅಕ್ಷರ ಗಾತ್ರ

ಭೋಪಾಲ: ಮಧ್ಯಪ್ರದೇಶ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ‘ಗೆಲುವು ಖಚಿತ’ ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ ವಿಶ್ವಾಸ ವ್ಯಕ್ತಪಡಿಸಿವೆ.

‘ತಮ್ಮ ಪಕ್ಷ ಭಾರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರಲಿದೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ ಎಣಿಕೆ ಮುನ್ನಾದಿನವಾದ ಶನಿವಾರ ಹೇಳಿದರು.

‘ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸ ಹಾಗೂ ಮಧ್ಯಪ್ರದೇಶದಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳಿಂದ ಇದು ಸಾಧ್ಯವಾಗಲಿದೆ. ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಸ್ಥಾನಗಳು ಬಿಜೆಪಿಗೆ ಲಭಿಸಲಿದೆ’ ಎಂದು ಅವರು ಸುದ್ದಿಗಾರರಲ್ಲಿ ತಿಳಿಸಿದರು.

ಮತ್ತೊಂದೆಡೆ ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಕಮಲ್‌ನಾಥ್‌, ತಮ್ಮ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. 

ಮತಗಟ್ಟೆ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಅವರು, ‘ಅದಕ್ಕೂ (ಸಮೀಕ್ಷೆ) ನನಗೂ ಯಾವುದೇ ಸಂಬಂಧವಿಲ್ಲ. ಮಧ್ಯಪ್ರದೇಶದ ಮತದಾರರ ಮೇಲೆ ಸಂಪೂರ್ಣ ವಿಶ್ವಾಸವಿದೆ’ ಎಂದರು.

ನಡ್ಡಾ ದೇವರ ಮೊರೆ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಮುರೌನಾ ಜಿಲ್ಲೆಯ ಶನೀಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಪಕ್ಷದ ಗೆಲುವಿಗಾಗಿ ಪ್ರಾರ್ಥಿಸಿದರು. 

ಶನಿವಾರ 63ನೇ ಹುಟ್ಟುಹಬ್ಬ ಆಚರಿಸಿದ ನಡ್ಡಾ ಅವರು ಗ್ವಾಲಿಯರ್‌ನಿಂದ 40 ಕಿ.ಮೀ. ದೂರದಲ್ಲಿರುವ ದೇವಾಲಯಕ್ಕೆ ತೆರಳುವಾಗ ಕೇಂದ್ರ ಸಚಿವ ನರೇಂದ್ರ ಸಿಂಗ್‌ ತೋಮರ್‌ ಮತ್ತು ಬಿಜೆಪಿಯ ಇತರ ಮುಖಂಡರು ಸಾಥ್‌ ನೀಡಿದರು. ಶುಕ್ರವಾರ ಅವರು ದತಿಯಾ ಜಿಲ್ಲೆಯ ಪೀತಾಂಬರ ಪೀಠದಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿದ್ದ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಮಧ್ಯಪ್ರದೇಶದ 230 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. 52 ಜಿಲ್ಲಾ ಕೇಂದ್ರಗಳಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT