ಗುರುವಾರ, 7 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ಜಯಿನಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆಟೋ ಚಾಲಕನ ಬಂಧನ, ಇತರ ಐವರ ವಿಚಾರಣೆ

Published 28 ಸೆಪ್ಟೆಂಬರ್ 2023, 13:14 IST
Last Updated 28 ಸೆಪ್ಟೆಂಬರ್ 2023, 13:14 IST
ಅಕ್ಷರ ಗಾತ್ರ

ಉಜ್ಜಯಿನಿ: 12 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಇತರ ಐದು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

'ವಿಡಿಯೊಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಆಧರಿಸಿ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಆಟೋದಲ್ಲಿನ ಪ್ರಯಾಣಿಕರ ಸೀಟ್‌ನಲ್ಲಿ ರಕ್ತದ ಕಲೆ ಕಂಡುಬಂದಿದೆ. ಇತರ ಐವರನ್ನು ವಿಚಾರಣೆಗೆ ಒಳಪಡಿಸಲಾಗಿದೆ' ಎಂದು ಉಜ್ಜಯಿನಿ ಎಸ್‌ಪಿ ಸಚಿನ್‌ ಶರ್ಮಾ ಹೇಳಿದ್ದಾರೆ.

ವಿಶೇಷ ತನಿಖಾ ದಳ (ಎಸ್‌ಐಟಿ) ಪ್ರಕರಣದ ತನಿಖೆ ಆರಂಭಿಸಿದೆ. ಬಾಲಕಿ ತನ್ನ ಹೆಸರು, ವಿಳಾಸದ ಬಗ್ಗೆ ಪೊಲೀಸರಿಗೆ ಸ್ಪಷ್ಟವಾಗಿ ತಿಳಿಸಿಲ್ಲ ಎಂದೂ ಅವರು ಹೇಳಿದ್ದಾರೆ.

ಅರೆ ಬೆತ್ತಲೆ ಸ್ಥಿತಿಯಲ್ಲಿ, ತೀವ್ರ ರಕ್ತಸ್ರಾವದಿಂದ ಬಳಲಿದ್ದ ಬಾಲಕಿಯು, ಉಜ್ಜಯಿನಿಯ ಮಹಾಕಾಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ರಸ್ತೆಗಳಲ್ಲಿ ರಕ್ಷಣೆಗಾಗಿ ಓಡಾಡಿದ್ದ ಘಟನೆ ಸೋಮವಾರ ವರದಿಯಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಉಜ್ಜಯಿನಿ ಪೊಲೀಸರು ತಿಳಿಸಿದ್ದಾರೆ.

13 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಜಿಲ್ಲೆಯ ಜೈತ್ವಾರ ಠಾಣೆಯಲ್ಲಿ ದೂರು ದಾಖಲಾಗಿದೆ. ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಬಾಲಕಿ ಒಬ್ಬಳೆಯೇ ಎಂಬುದನ್ನು ಆಕೆಯ ಕುಟುಂಬದವರೇ ಖಚಿತಪಡಿಸಬೇಕು ಎಂದು ಸತ್ನಾ ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT