ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಧ್ಯಪ್ರದೇಶ ‌| ಗ್ವಾಲಿಯರ್‌ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Published 1 ಡಿಸೆಂಬರ್ 2023, 12:39 IST
Last Updated 1 ಡಿಸೆಂಬರ್ 2023, 12:39 IST
ಅಕ್ಷರ ಗಾತ್ರ

ಗ್ವಾಲಿಯರ್‌: ಮಧ್ಯಪ್ರದೇಶದ ಗ್ವಾಲಿಯರ್‌ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದು (ಶುಕ್ರವಾರ) ಭೇಟಿ ನೀಡಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶವು ಡಿಸೆಂಬರ್‌ 3 ರಂದು ನಡೆಯಲಿದೆ. ಈ ಮಧ್ಯೆ ಮಧ್ಯಪ್ರದೇಶಕ್ಕೆ ನಡ್ಡಾ ಆಗಮಿಸಿದ್ದಾರೆ.

ಗ್ವಾಲಿಯರ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಡ್ಡಾ ಅವರನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ರಾಜ್ಯ ಗೃಹ ಸಚಿವ ನರೋತ್ತಮ ಮಿಶ್ರಾ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಇತರರು ಬರಮಾಡಿಕೊಂಡರು.

ನಡ್ಡಾ ರಾಜ್ಯಕ್ಕೆ ಎರಡು ದಿನಗಳ ಭೇಟಿಯನ್ನು ಕೈಗೊಂಡಿದ್ದು, ಸಂಜೆ ದಾತಿಯಾದಲ್ಲಿರುವ ಪೀತಾಂಬರ ಪೀಠ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲ್ಲಿದ್ದಾರೆ. ರಾತ್ರಿ ಗ್ವಾಲಿಯರ್‌ನಲ್ಲೇ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಸಂಜೆ ವಿವಿಧ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಬಿಡುಗಡೆಗೊಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ‘ಹೆಚ್ಚು ಬಹುಮತ ಪಡೆಯುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದ್ದರು.

230 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮಧ್ಯಪ್ರದೇಶದಲ್ಲಿ ನವೆಂಬರ್‌ 17ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಶೇಕಡ 77.15 ಮತದಾನ ದಾಖಲಾಗಿದೆ. ಡಿಸೆಂಬರ್‌ 3 ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT